ನನ್ನ ಮಗನಿಗೆ ನೇಹಾ ಪ್ರಪೋಸ್ ಮಾಡಿದ್ದಳು: ಆರೋಪಿ ಫಯಾಜ್ ತಾಯಿ, ವಿಡಿಯೋ ನೋಡಿ
ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆಯಾಗಿತ್ತು. ಈ ಕೊಲೆ ಪ್ರೀತಿ ವಿಚಾರಕ್ಕೆ ಆಗಿದೆ ಅಂತ ಒಂದು ವರ್ಗದ ವಾದವಾದರೇ, ಲವ್ ಜಿಹಾದ್ಗೆ ವಿರೋಧಿಸಿದಕ್ಕೆ ಕೊಲೆ ನಡೆದಿದೆ ಎಂಬುವುದು ಮತ್ತೊಂದು ವರ್ಗದ ವಾದ. ಈ ಮಧ್ಯೆ ಆರೋಪಿ ಫಯಾಜ್ ತಾಯಿ ಮುಮ್ತಾಜ್ ಮಾತನಾಡಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಧಾರವಾಡ, ಏಪ್ರಿಲ್ 20: ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಈ ಕೊಲೆ ಮಾಡಿದ ಆರೋಪಿ ಫಯಾಜ್ನನ್ನು ಗಲ್ಲಿಗೆ ಏರಿಸಬೇಕು ಅಥವಾ ಶೂಟ್ಔಟ್ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ನೇಹಾಳನ್ನು ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇದು ಲವ್ ಜಿಹಾದ್ ಎಂದು ಹೇಳುತ್ತಿವೆ. ಆದರೆ ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರೇ, ಗೃಹ ಸಚಿವ ಜಿ ಪರಮೇಶ್ವರ ಅವರು “ಫಯಾಜ್ ಮತ್ತು ನೇಹಾ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್ನಿಂದ ದೂರವಾಗಲು ಯತ್ನಿಸಿದ್ದಾಳೆ. ಹೀಗಾಗಿ ಕೊಲೆ ನಡೆದಿದೆ” ಎಂದು ಹೇಳಿದ್ದರು.
ಪ್ರಕರಣ ಸಂಬಂಧ ಕೊಲೆ ಆರೋಪಿ ಫಯಾಜ್ ತಾಯಿ ಮುಮ್ತಾಜ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನನ್ನ ಮಗ ಫಯಾಜ್ಗೆ ನೇಹಾ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ಲವ್ ಬೇಡ ಅಂತ ಹೇಳಿದ್ದೆ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕು ಎಂದಿದ್ದಾರೆ.
ಮಗ ಕೆಎಎಸ್ ಅಧಿಕಾರಿ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಈ ರೀತಿ ಆಗಿದ್ದಕ್ಕೆ ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಫಯಾಜ್-ನೇಹಾ ಮದುವೆ ಆಗಬೇಕು ಅಂತ ಇದ್ದರು. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.
Published on: Apr 20, 2024 11:08 AM
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
