ಹುಬ್ಬಳ್ಳಿ: ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ

Edited By:

Updated on: Feb 06, 2026 | 4:00 PM

ಹುಬ್ಬಳ್ಳಿಯಲ್ಲಿ ಹಿಂದೂ ಧರ್ಮಕ್ಕೆ ಅಪಮಾನವಾಗುವಂತಹ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಆರೋಪದ ಮೇಲೆ ಯುವಕನನ್ನು ಹಳೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಯೂಟ್ಯೂಬರ್‌ನ ವಿಡಿಯೋವನ್ನು ಹಂಚಿಕೊಂಡಿದ್ದ. ಪೊಲೀಸರು ಸ್ವಯಂ ಪ್ರೇರಿತ ದೂರನ್ನ ದಾಖಲಿಸಿಕೊಂಡು, ಕಳೆದ ರಾತ್ರಿ ಆತನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಹುಬ್ಬಳ್ಳಿ, ಫೆಬ್ರವರಿ 06: ಹಿಂದೂ ಧರ್ಮಕ್ಕೆ ಅಪಮಾನವಾಗುವ ರೀತಿಯಲ್ಲಿ ವಾಟ್ಸಪ್​​ ಸ್ಟೇಟಸ್ ಇಟ್ಟಿದ್ದ ಯುವಕನನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ನೂರಾನಿ ಫ್ಲ್ಯಾಟ್ ನಿವಾಸಿ ದಾದಾಪೀರ್ ಹೆಬ್ಬಳ್ಳಿ (27) ಬಂಧಿತ ಯುವಕ. ಹಳೆ ಹುಬ್ಬಳ್ಳಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕಳೆದ ರಾತ್ರಿ ಬಂಧಿಸಿ‌ ಜೈಲಿಗಟ್ಟಿದ್ದಾರೆ. ಯೂಟ್ಯೂಬರ್ ಒಬ್ಬರು ಹಿಂದೂ ದೇವರ ಬಳಿ ಕಲ್ಮಾ ಹೇಳಿದ್ದ ವಿಡಿಯೋವನ್ನು ದಾದಾಪೀರ್ ತನ್ನ ವಾಟ್ಸಾಪ್ ಸ್ಟೇಟಸ್‌ಗೆ ಹಾಕಿಕೊಂಡಿದ್ದ. ಈ ಸ್ಟೇಟಸ್ ಹಿಂದೂ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More