Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬಾಲಕಿಯರ ಜೊತೆ ಹೆಡ್ ಕಾನ್ಸ್ಟೇಬಲ್ ಅನುಚಿತ ವರ್ತನೆ

ಹುಬ್ಬಳ್ಳಿ: ಬಾಲಕಿಯರ ಜೊತೆ ಹೆಡ್ ಕಾನ್ಸ್ಟೇಬಲ್ ಅನುಚಿತ ವರ್ತನೆ

ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Nov 04, 2024 | 2:32 PM

ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್​ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಖದೀಮನವರ ಅನುಚಿತವಾಗಿ ವರ್ತಿಸಿದ ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್. ಸದ್ಯ ಖದೀಮನವರನನ್ನು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ, ನವೆಂಬರ್​ 04: ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್​ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖದೀಮನವರ ತಮ್ಮ ಏರಿಯಾದಲ್ಲಿನ ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹೆಡ್ ಕಾನ್ಸ್ಟೇಬಲ್​ಗೆ ಸಾರ್ವಜನಿಕರು ಥಳಿಸಿದ್ದಾರೆ. ಬಳಿಕ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾತನಾಡಿ,  ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರವಿವಾರ (ನ.03) ಮಧ್ಯಾಹ್ನ 3-4 ಗಂಟೆ ಸಮಯದಲ್ಲಿ ಮನೆಯೊಳಗೆ ಕರೆದು ಬಾಲಕಿ ಜೊತೆಗೆ ಅನುಚಿತವಾಗಿ ನಡೆದುಕೊಂಡಿದ್ದಾರೆಂದು ಆರೋಪಿಸಲಾಗಿದೆ. ಬಾಲಕಿಯ ಪೋಷಕರು ಆರೋಪಿಗೆ ಒಂದೆರಡೇಟು ಹೊಡೆದಿದ್ದಾರೆ. ನಮ್ಮ ಗಮನಕ್ಕೆ ಬಂದ ಕೂಡಲೇ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದೇವೆ. ಮಗುವಿನ ಪೋಷಕರ ಹೇಳಿಕೆಯನ್ನು ಪಡೆದಿದ್ದೇವೆ ಎಂದು ಹೇಳಿದರು.

ಒಳಗೆ ಕರೆದು ಬಾಗಿಲು ಹಾಕಿ, ಕೈಗೆ ಮುತ್ತು ಕೊಟ್ಟ. ಹೊರಗಿನಿಂದ ಬಾಗಿಲು ಬಡೆದಾಗ ಮಕ್ಕಳನ್ನು ಹೊರಗೆ ಕಳಿಸಿದ್ದಾನೆ ಎಂಬ ಆರೋಪ ಇದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಸಂಬಂಧಪಟ್ಟ ಆರೋಪಿಯನ್ನು ವಶಕ್ಕೆ ಪಡೆದು ಅಗತ್ಯ ಕ್ರಮ ಕೈಗೊಂಡಿದ್ದೇವೆ.  ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಾನೆ, ಇಲ್ವೋ ಎಂಬುದು ಮುಖ್ಯ ಅಲ್ಲ, ಆರೋಪಿ ಹಿನ್ನೆಲೆ ನಮಗೆ ಮುಖ್ಯ ಆಗಲ್ಲ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Nov 04, 2024 01:32 PM