ನಾಲ್ಕು ದಿನಗಳಿಂದ ವಿದ್ಯುತ್ ಕಡಿತ: ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಹುಬ್ಬಳ್ಳಿ ಗಾಂಧಿನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತದಿಂದ ಜನರು ಪರದಾಡುತ್ತಿದ್ದಾರೆ. ಬಿರುಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದರೂ, ಹೆಸ್ಕಾಂ ಮತ್ತು ಪಾಲಿಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸಿಲ್ಲ. ಕುಡಿಯುವ ನೀರು ಮತ್ತು ಶೌಚಾಲಯಕ್ಕೂ ನೀರಿಲ್ಲದೆ ಸಾವಿರಾರು ಜನ ತೀವ್ರ ತೊಂದರೆ ಅನುಭವಿಸುತ್ತಿದ್ದು, ಆಕ್ರೋಶಗೊಂಡ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿ, ಮೇ.21: ನಗರದ ಗಾಂಧಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ಕಡಿತದಿಂದಾಗಿ ಸಾರ್ವಜನಿಕರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ. ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಮತ್ತು ಮರಗಳು ನೆಲಕ್ಕುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಇಲ್ಲದ ಕಾರಣ ಕುಡಿಯುವ ನೀರಿಗೂ, ಶೌಚಾಲಯಕ್ಕೂ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ಹೆಸ್ಕಾಂ (HESCOM) ಅಧಿಕಾರಿಗಳು ಮತ್ತು ಪಾಲಿಕೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮರಗಳನ್ನು ತೆರವುಗೊಳಿಸುವಲ್ಲಿ ಮತ್ತು ವಿದ್ಯುತ್ ಕಂಬಗಳನ್ನು ಸರಿಪಡಿಸುವಲ್ಲಿ ವಿಳಂಬವಾಗಿದೆ. ರಾತ್ರಿ ಹೊತ್ತು ಮನೆಯಲ್ಲಿ ಇರಲಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಗೋಳು ತೋಡಿಕೊಂಡಿದ್ದಾರೆ. ಜನಪ್ರತಿನಿಧಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?

