ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್ನಲ್ಲಿ ಸುರಂಗ ಮಾರ್ಗ ಪತ್ತೆ
ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್‌ನ ಬಾತ್‌ರೂಮ್‌ನಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಸಿಸಿಬಿ ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಹುಬ್ಬಳ್ಳಿ (ಜು.6): ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣಾ ವ್ಯಾಪ್ತಿಯ ಪಾರಿಜಾತ ರೆಸಿಡೆನ್ಸಿಯಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಸಿಸಿಬಿ ಪೊಲೀಸರು, ಮೈಸೂರಿನ ಒಡನಾಡಿ ಸಂಸ್ಥೆಯ ಸಹಯೋಗದೊಂದಿಗೆ ಭೇದಿಸಿದ್ದಾರೆ. ದಾಳಿಯ ಸಂದರ್ಭದಲ್ಲಿ, ಮಹಿಳೆಯರನ್ನು ಲಾಡ್ಜ್‌ನ ಬಾತ್‌ರೂಮ್‌ನಿಂದ ರಹಸ್ಯ ಕೋಣೆಗೆ ಕೊಂಡೊಯ್ಯಲಾಗಿತ್ತು. ಆದರೆ, ಸಿಸಿಬಿ ಪೊಲೀಸರು ರಹಸ್ಯ ಕೋಣೆಯ ಪ್ರವೇಶ ದ್ವಾರವನ್ನು ತೆರೆದು ಮಹಿಳೆಯರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಈ ದಾಳಿಯಲ್ಲಿ ಹಲವು ಪುರುಷರನ್ನು ಬಂಧಿಸಲಾಗಿದೆ. ಲಾಡ್ಜ್ ಮಾಲೀಕ ಪರಾರಿಯಾಗಿದ್ದು, ಮ್ಯಾನೇಜರ್ ಮತ್ತು ಸಿಬ್ಬಂದಿಯನ್ನ ಬಂಧಿಸಿದ್ದಾರೆ.
Published on: Jul 06, 2025 03:34 PM