Loading video

ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 19, 2025 | 7:00 PM

ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ತೆಂಗಿನಕಾಯಿ ಅವರ ಕಚೇರಿಯಲ್ಲಿ ಮಾರ್ಚ್ 16 ರಂದು ಕಳ್ಳತನ ನಡೆದಿದೆ. ಜೆ.ಸಿ. ನಗರದ ಟೌನ್ ಹಾಲ್ ಕಟ್ಟಡದಲ್ಲಿರುವ ಕಚೇರಿಯ ಹಿಂಬಾಗಿಲ ಮೂಲಕ ಖದೀಮರು ನುಗ್ಗಿ ಟಿವಿ ಸೇರಿದಂತೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಹುಬ್ಬಳ್ಳಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ, ಮಾರ್ಚ್ 19: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಕಚೇರಿಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಜೆ.ಸಿ.ನಗರದ ಟೌನ್​ಹಾಲ್ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿನ ಟಿವಿವನ್ನು ಕಳ್ಳತನ (theft) ಮಾಡಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಸರ್ಕಾರಿ ರಜೆ ದಿನವಾದ ರವಿವಾರದಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.