ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ ಹೇಗಿದೆ ನೋಡಿ
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿವೆ. ಹಿಂದೂಪರ ಸಂಘಟನೆಗಳ ಮುಖಂಡರು ಹಾಲು ಕಂಬ ನೆಡುವ ಮೂಲಕ ಮೂರು ದಿನಗಳ ಆಚರಣೆಗೆ ಚಾಲನೆ ನೀಡಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಕಳೆದ ನಾಲ್ಕು ವರ್ಷಗಳಿಂದಲೂ ಇಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ನಡೆಯುತ್ತಿದೆ. ಅವಳಿ ನಗರದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಕಡೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, ಶಾಂತಿಯುತ ಆಚರಣೆಗಾಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಶೇಷವಾಗಿ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಗಣೇಶೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಹುಬ್ಬಳ್ಳಿಯ ಇತಿಹಾಸ ಪ್ರಸಿದ್ಧ ಈದ್ಗಾ ಮೈದಾನದಲ್ಲಿ ಈ ವರ್ಷ ಐದನೇ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಸಿದ್ಧತೆಗಳು ಆರಂಭಗೊಂಡಿವೆ. ಕಳೆದ ನಾಲ್ಕು ವರ್ಷಗಳಿಂದಲೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮತ್ತು ನ್ಯಾಯಾಲಯದ ಅನುಮತಿಯೊಂದಿಗೆ ಮೂರು ದಿನಗಳ ಕಾಲ ಇಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಈ ವರ್ಷವೂ ಕೂಡ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ಹಾಲು ಕಂಬ ನೆಡುವ ಮೂಲಕ ಗಣೇಶೋತ್ಸವದ ಸಿದ್ಧತೆಗಳಿಗೆ ಅಧಿಕೃತ ಚಾಲನೆ ನೀಡಿದ್ದಾರೆ. ಸೋಮವಾರ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ಹಬ್ಬದ ಸಂಭ್ರಮ ಮನೆ ಮಾಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 12, 2026 03:50 PM
Loading...
Unable to load recommendations.
Follow Us
