AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹಂತಕನ ಪ್ಲಾನ್ ಏನಿತ್ತು ಗೊತ್ತಾದ್ರೆ ಬೆಚ್ಚಿಬೀಳ್ತೀರಿ!

ಸಂಜಯ್ಯಾ ಚಿಕ್ಕಮಠ
| Edited By: |

Updated on: Dec 23, 2025 | 12:33 PM

Share

ಹುಬ್ಬಳ್ಳಿ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಈಗ ಅಚ್ಚರಿಯ ತಿರುವು ಸಿಕ್ಕಿದೆ. ದಲಿತ ಯುವಕನನ್ನು ಮದುವೆಯಾಗಿದ್ದ ಆರು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅನ್ನು ತಂದೆ ಪ್ರಕಾಶ್ ಕೊಡಲಿಯಿಂದ ಕೊಚ್ಚಿ ಕೊಂದಿದ್ದ. ಆದರೆ, ಈ ಕ್ರೂರಿ ತಂದೆ ಮಗಳ ಹತ್ಯೆಗೂ ಮುನ್ನ ಅಳಿಯ ವಿವೇಕಾನಂದನ ಇಡೀ ಕುಟುಂಬವನ್ನೇ ನಿರ್ನಾಮ ಮಾಡಲು ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಮಾಹಿತಿ ಈಗ ಎಫ್‌ಐಆರ್‌ನಿಂದ ಹೊರಬಿದ್ದಿದೆ.

ಹುಬ್ಬಳ್ಳಿ, ಡಿಸೆಂಬರ್ 23: ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದಲ್ಲಿ ಗರ್ಭಿಣಿ ಮಗಳನ್ನು ತಂದೆಯೇ ಹತ್ಯೆ ಮಾಡಿರುವ ಘಟನೆಗೆ ರೋಚಕ ಟ್ವಿಸ್ಟ್ ದೊರೆತಿದೆ. ಮರ್ಯಾದಾ ಹತ್ಯೆಗೂ ಮುನ್ನ ಅಳಿ ವಿವೇಕಾನಂದನ ಇಡೀ ಕುಟುಂಬವನ್ನೇ ನಾಶ ಮಾಡಲು ತಂದೆ ಪ್ರಕಾಶ್ ಗೌಡ ಸಂಚು ರೂಪಿಸಿದ್ದ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ದಲಿತ ಯುವಕ ವಿವೇಕಾನಂದನನ್ನು ಮದುವೆಯಾಗಿದ್ದಕ್ಕೆ 20 ವರ್ಷ ವಯಸ್ಸಿನ ಮಾನ್ಯಾ ಪಾಟೀಲ್ ಅವರನ್ನು ಅವರ ತಂದೆ ಪ್ರಕಾಶ್ ಗೌಡ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆದರೆ, ಕೇವಲ ಮಗಳ ಹತ್ಯೆ ಮಾತ್ರವಲ್ಲ, ಅಳಿಯ ವಿವೇಕಾನಂದನ ತಂದೆ ಮತ್ತು ವಿವೇಕಾನಂದನನ್ನೂ ಕೊಲ್ಲಲು ಪ್ರಕಾಶ್ ಗೌಡ ಮಾಸ್ಟರ್ ಪ್ಲಾನ್ ಮಾಡಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ಈ ಎರಡು ಕೊಲೆ ಯತ್ನಗಳು ವಿಫಲವಾದ ನಂತರ ಆತ ಮಗಳನ್ನೇ ಕೊಂದಿದ್ದಾನೆ. ಈ ಕೃತ್ಯದಲ್ಲಿ ಕೆಲವು ಗ್ರಾಮಸ್ಥರ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ಸಂಪೂರ್ಣ ವಿವರಗಳಿಗೆ ಓದಿ: ದಲಿತ ಯುವಕನ ಪ್ರೀತಿಸಿ ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಪೈಶಾಚಿಕ ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ