ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ

Edited By:

Updated on: Nov 12, 2026 | 10:28 AM

ನಟ ಪ್ರಮೋದ್ ಶೆಟ್ಟಿ ಹುಬ್ಬಳ್ಳಿ ಹಂಟರ್ಸ್ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಆಹಾರ, ಅಲ್ಲಿನ ಜನರ ಸ್ವಭಾವ ಹಾಗೂ ತಮ್ಮ ಪಾತ್ರದ ಕುರಿತು ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣದ ತಾರೆಯರೊಂದಿಗೆ ಕೆಲಸ ಮಾಡಿದ ಬಗ್ಗೆಯೂ ತಿಳಿಸಿದ್ದು, ಈ ಚಿತ್ರ ಉತ್ತರ ಕರ್ನಾಟಕದಲ್ಲಿ ನಟಿಸುವ ಬಹುದಿನಗಳ ಕನಸನ್ನು ನನಸು ಮಾಡಿದೆ ಎಂದಿದ್ದಾರೆ.

ನಟ ಪ್ರಮೋದ್ ಶೆಟ್ಟಿ ಅವರು ಹುಬ್ಬಳ್ಳಿ ಹಂಟರ್ಸ್ ಚಿತ್ರದ ಮೂಲಕ ಗಂಡು ಮೆಟ್ಟಿದ ನಾಡು ಉತ್ತರ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆ ಹೆಚ್ಚಾಗಿ ಕರಾವಳಿ ಭಾಗದ ಕಥೆಗಳಲ್ಲಿ ಅಥವಾ ಪೊಲೀಸ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಶೆಟ್ಟಿ, ಈ ಚಿತ್ರದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

‘ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ 30-35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಈ ಸಂದರ್ಭದಲ್ಲಿ ಉತ್ತರ ಕರ್ನಾಟಕದ ರುಚಿಕರ ಆಹಾರವಾದ ಜೋಳದ ರೊಟ್ಟಿ, ಉಚ್ಚಳ ಚಟ್ನಿ, ಬದನೆಕಾಯಿ ಎಣಗಾಯಿ ಸವಿದಿದ್ದಾಗಿ’ ಪ್ರಮೋದ್ ಶೆಟ್ಟಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿರುವ ಯುವಕರೊಂದಿಗೆ ಕೆಲಸ ಮಾಡಿದ ಅನುಭವವನ್ನು ಹಂಚಿಕೊಂಡ ಅವರು, ಆರಂಭದಲ್ಲಿ ಅವರಿಗೆ ಸಿನಿಮಾ ನಟನೆಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾಯಿತು, ಆದರೆ ನಂತರ ಉತ್ತಮವಾಗಿ ಪ್ರದರ್ಶನ ನೀಡಿದರು ಎಂದು ಹೇಳಿದ್ದಾರೆ. ಹುಬ್ಬಳ್ಳಿ ಹಂಟರ್ಸ್ ಚಿತ್ರದ ಮೂಲಕ ಉತ್ತರ ಕರ್ನಾಟಕದಲ್ಲಿ ಸಿನಿಮಾ ಮಾಡುವ ಬಹುದಿನಗಳ ಆಸೆ ನೆರವೇರಿದೆ ಎಂದು ಪ್ರಮೋದ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More