ಹುಬ್ಬಳ್ಳಿ: ಹಳೇ ನಾಣ್ಯ, ನೋಟು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಸ್ವಾತಂತ್ರೋತ್ಸವ ಸಂಭ್ರಮಾಚರಣೆ

Edited By:

Updated on: Aug 15, 2024 | 12:43 PM

ಧಾರವಾಡ ಜಿಲ್ಲೆಯ ಕಲಘಟಗಿ ಯುವಕ ಸುನೀಲ್ ಕಮ್ಮಾರ ಎಂಬ ಯುವಕ ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಹಳೇ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಸಂಭ್ರಮಿಸಿದ್ದಾರೆ. ಕಲಘಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಆಚರಣೆ ನೆರವೇರಿದೆ.

ಹುಬ್ಬಳ್ಳಿ, ಆಗಸ್ಟ್​.15: ಹಳೇ ನಾಣ್ಯಗಳು ಹಾಗೂ ನೋಟುಗಳನ್ನು ಸಂಗ್ರಹಿಸಿ ಭಾರತ ನಕ್ಷೆ ತಯಾರಿಸಿ ಯುವಕರು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನಲೆ ಧಾರವಾಡ ಜಿಲ್ಲೆಯ ಕಲಘಟಗಿ ಯುವಕ ಸುನೀಲ್ ಕಮ್ಮಾರ ಎಂಬ ಯುವಕ ವಿಭಿನ್ನ ಪ್ರಯತ್ನ ಮಾಡಿದ್ದು ಹಳೇ ನಾಣ್ಯಗಳನ್ನು ಸಂಗ್ರಹ ಮಾಡಿ ಭಾರತ ನಕ್ಷೆ ತಯಾರಿಸಿ ಹೂವಿನ ಅಲಂಕಾರ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾನೆ. ಕಲಘಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಆಚರಣೆ ನೆರವೇರಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More