3 ದಿನಗಳಿಂದ ವಿದ್ಯುತ್ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ
ಹುಬ್ಬಳ್ಳಿಯ ಗಾಂಧಿನಗರ ಲೇಔಟ್‌ನಲ್ಲಿ ಮೂರು ದಿನಗಳಿಂದ ವಿದ್ಯುತ್ ಕಡಿತದಿಂದ ರೋಸಿಹೋದ ಜನ ಗೋಕುಲ ರಸ್ತೆ ತಡೆದು ಹೆಸ್ಕಾಂ ವಿರುದ್ಧ ಪ್ರತಿಭಟಿಸಿದ್ದಾರೆ. ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.
ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ ಜನರ ಅಸಮಾಧಾನ ಹೆಚ್ಚಿದೆ. ತಮ್ಮ ಸಮಸ್ಯೆಗಳನ್ನು ಕೇಳಲು ಸ್ಥಳಕ್ಕೆ ಅಧಿಕಾರಿಗಳು ಅಥವಾ ಕಾರ್ಪೊರೇಟರ್ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ನಾಗರಿಕರು ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಪುನರ್ಸ್ಥಾಪಿಸಲು ಒತ್ತಾಯಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

