3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ

Edited By:

Updated on: May 21, 2026 | 10:48 AM

ಹುಬ್ಬಳ್ಳಿಯ ಗಾಂಧಿನಗರ ಲೇಔಟ್‌ನಲ್ಲಿ ಮೂರು ದಿನಗಳಿಂದ ವಿದ್ಯುತ್ ಕಡಿತದಿಂದ ರೋಸಿಹೋದ ಜನ ಗೋಕುಲ ರಸ್ತೆ ತಡೆದು ಹೆಸ್ಕಾಂ ವಿರುದ್ಧ ಪ್ರತಿಭಟಿಸಿದ್ದಾರೆ. ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ.

ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ ಜನರ ಅಸಮಾಧಾನ ಹೆಚ್ಚಿದೆ. ತಮ್ಮ ಸಮಸ್ಯೆಗಳನ್ನು ಕೇಳಲು ಸ್ಥಳಕ್ಕೆ ಅಧಿಕಾರಿಗಳು ಅಥವಾ ಕಾರ್ಪೊರೇಟರ್ ಬರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿ ಕೂಡ ನಡೆದಿದೆ. ನಾಗರಿಕರು ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ್ದು, ಕೂಡಲೇ ವಿದ್ಯುತ್ ಸಂಪರ್ಕ ಪುನರ್ಸ್ಥಾಪಿಸಲು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More