ಹುಬ್ಬಳ್ಳಿ: ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಿಬ್ಬಂದಿ ಸಾವು, ಕೊನೇ ಕ್ಷಣದ ಸಿಸಿಟಿವಿ ವಿಡಿಯೋ
ಅಂಗಡಿಗೆ ಬಟ್ಟೆ ಖರೀದಿ ಮಾಡಲು ಗ್ರಾಹಕರು ಬಂದಿದ್ದ ವೇಳೆ ಅವರಿಗೆ ಬಟ್ಟೆಗಳನ್ನು ತೋರಿಸುತ್ತಲೇ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್ಆರ್ ಸಾರಿ ಸೆಂಟರ್ನಲ್ಲಿ ಸಂಭವಿಸಿದೆ. ಬಟ್ಟೆ ತೋರಿಸುತ್ತಿದ್ದಾಗ ಕ್ಷಣಮಾತ್ರದಲ್ಲಿಯೇ ಎದೆನೋವು ಕಾಣಿಸಿಕೊಂಡು ಕೆಳಗೆ ಬಿದ್ದ ಸಿಬ್ಬಂದಿ ಬವರ್ ಸಿಂಗ್ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.
ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್ಆರ್ ಸಾರಿ ಸೆಂಟರ್ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ ವಿಡಿಯೋ ಬಹಿರಂಗವಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.
Latest Videos

Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ

ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ

ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
