ಹುಬ್ಬಳ್ಳಿ: ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಿಬ್ಬಂದಿ ಸಾವು, ಕೊನೇ ಕ್ಷಣದ ಸಿಸಿಟಿವಿ ವಿಡಿಯೋ

Edited By:

Updated on: Feb 27, 2025 | 8:49 AM

ಅಂಗಡಿಗೆ ಬಟ್ಟೆ ಖರೀದಿ ಮಾಡಲು ಗ್ರಾಹಕರು ಬಂದಿದ್ದ ವೇಳೆ ಅವರಿಗೆ ಬಟ್ಟೆಗಳನ್ನು ತೋರಿಸುತ್ತಲೇ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲಿ ಸಂಭವಿಸಿದೆ. ಬಟ್ಟೆ ತೋರಿಸುತ್ತಿದ್ದಾಗ ಕ್ಷಣಮಾತ್ರದಲ್ಲಿಯೇ ಎದೆನೋವು ಕಾಣಿಸಿಕೊಂಡು ಕೆಳಗೆ ಬಿದ್ದ ಸಿಬ್ಬಂದಿ ಬವರ್ ಸಿಂಗ್​ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಹುಬ್ಬಳ್ಳಿ, ಫೆಬ್ರವರಿ 27: ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲೊಂದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಗ್ರಾಹಕರಿಗೆ ಬಟ್ಟೆ ತೋರಿಸುತ್ತಿದ್ದಾಗಲೇ ಬಟ್ಟೆ ಅಂಗಡಿ ಸಿಬ್ಬಂದಿಗೆ ಹೃದಯಾಘಾತವಾಗಿದೆ. ಪರಿಣಾಮವಾಗಿ ಆ ಸಿಬ್ಬಂದಿ ಮೃತಪಟ್ಟಿದ್ದಾರೆ. ಸಿಬ್ಬಂದಿ ಹೃದಯಾಘಾತದಿಂದ ನರಳಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೃತರನ್ನು 43 ವರ್ಷ ವಯಸ್ಸಿನ ಭವರ್ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಮೂಲತಃ ರಾಜಸ್ಥಾನದವರಾಗಿದ್ದಾರೆ. ಇದೇ ತಿಂಗಳು 22 ರಂದು ಘಟನೆ ಸಂಭವಿಸಿದ್ದು, ಸದ್ಯ ಅದಕ್ಕೆ ಸಂಬಂಧಿಸಿದ ವಿಡಿಯೋ ಬಹಿರಂಗವಾಗಿದೆ. ಸಿಸಿಟಿವಿ ವಿಡಿಯೋ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ