ಜಸ್ಟ್ ೧ ರನ್ನಿಂದ ಶತಕ ಮಿಸ್: ಫೈನಲ್ಗೇರಿದ ಪಡಿಕ್ಕಲ್ ಪಡೆ
Mangalore Dragons vs Hubli Tigers: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ಪರ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 64 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 5 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ ಅಜೇಯ 99 ರನ್ ಬಾರಿಸಿದರು.
ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಮೈಸೂರಿನ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ನೇತೃತ್ವದ ಹುಬ್ಬಳ್ಳಿ ಟೈಗರ್ಸ್ ಹಾಗೂ ಶ್ರೇಯಸ್ ಗೋಪಾಲ್ ಮುಂದಾಳತ್ವದ ಮಂಗಳೂರು ಡ್ರ್ಯಾಗನ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ಪರ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 64 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 5 ಸಿಕ್ಸ್ ಹಾಗೂ 10 ಫೋರ್ ಗಳೊಂದಿಗೆ ಅಜೇಯ 99 ರನ್ ಬಾರಿಸಿದರು.
ಮತ್ತೊಂದೆಡೆ ಅಭಿನವ್ ಮನೋಹರ್ 23 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 50 ರನ್ ಚಚ್ಚಿದರು. ಈ ಮೂಲಕ ಹುಬ್ಬಳ್ಳಿ ಟೈಗರ್ಸ್ ತಂಡವು 20 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 210 ಕಲೆಹಾಕಿತು.
211 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಮಂಗಳೂರು ಡ್ರ್ಯಾಗನ್ಸ್ ತಂಡವು 16.1 ಓವರ್‌ಗಳಲ್ಲಿ 100 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಹುಬ್ಬಳ್ಳಿ ಟೈಗರ್ಸ್ ತಂಡವು 110 ರನ್ ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ.

