ಬೆಂಗಳೂರಿನಲ್ಲಿ ಜೂ. ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್

Updated on: Mar 08, 2026 | 1:43 PM

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾ.8) ಮಹಾದೇವಪುರದ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಎನ್​ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR) ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾರ್ಚ್ 8) ಮಹಾದೇವಪುರ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಏನ್​ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜೂನಿಯರ್ ಎನ್​ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ ಆಸೆಯಿಂದ ಹಲವರು ಆಸ್ಪತ್ರೆಯ ಒಳಗೆ ನುಗ್ಗಿದರು. ಇದರಿಂದ ಆಸ್ಪತ್ರೆಯ ಎಸ್ಕಲೇಟರ್​​ಗೆ ಹಾನಿ ಆಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More