Loading video

ಮೈಸೂರು: ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಬೆಂಕಿ ಅವಘಡ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 22, 2025 | 5:27 PM

ಮೈಸೂರಿನ ವಸ್ತುಪ್ರದರ್ಶನ ಆವರಣದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಡಾಲಿ ಧನಂಜಯ ಅವರ ಮದುವೆ ಸೆಟ್ ಬಳಿ ಈ ಬೆಂಕಿ ಕಾಣಿಸಿಕೊಂಡಿದೆ. ಕಿಡಿಗೇಡಿಗಳ ಕೃತ್ಯದಿಂದ ಈ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಎರಡು ಮರಗಳು ಸುಟ್ಟು ಭಸ್ಮವಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಮೈಸೂರು, ಫೆಬ್ರವರಿ 22: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿನ್ನೆ ಬೆಂಕಿ (fire) ಕಾಣಿಸಿಕೊಂಡಿತ್ತು. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ‌ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಮಧ್ಯೆ ನಗರದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹಲವು ತ್ಯಾಜ್ಯಗಳು ಸುಟ್ಟು ಭಸ್ಮವಾಗಿದೆ. ನಗರದ ವಸ್ತುಪ್ರದರ್ಶನ ಆವರಣದಲ್ಲಿ‌ ಇಂದು ಬೃಹತ್ ಬೆಂಕಿ ಕಾಣಿಸಿಕೊಂಡಿದೆ. ಡಾಲಿ ಧನಂಜಯ ಮದುವೆಗೆ ಹಾಕಲಾಗಿದ್ದ ಸೆಟ್ ಪಕ್ಕದಲ್ಲಿ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಆವರಣದ ಎರಡು ಮರಗಳು ಬೆಂಕಿಗಾಹುತಿಯಾಗಿದೆ. ವಸ್ತು ಪ್ರದರ್ಶನ ಆವರಣದಲ್ಲಿ ಹಾಕಲಾಗಿದ್ದ ತ್ಯಾಜ್ಯಕ್ಕೆ ಬೆಂಕಿ ಹಾಕಲಾಗಿದೆ. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಲಾಗಿದೆ.

ಮತ್ತಷ್ಟು ವಿಡಿಯೂ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Feb 22, 2025 05:19 PM