ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ 3.14 ಕೋಟಿ ರೂ. ವೆಚ್ಚದ ಕಟ್ಟಡ

Edited By:

Updated on: Aug 20, 2026 | 2:11 PM

Bidar News: ಹುಮನಾಬಾದ್‌ನಲ್ಲಿ 3.14 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್ ಪುರಭವನವು 7 ವರ್ಷ ಕಳೆದರೂ ಉದ್ಘಾಟನೆಯಾಗದೆ ಪಾಳು ಬಂಗಲೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ವ್ಯರ್ಥವಾಗಿದ್ದು, ಕಟ್ಟಡದೊಳಗಿನ ವಿದ್ಯುತ್ ಉಪಕರಣ, ಫ್ಯಾನ್‌ಗಳು, ಕುರ್ಚಿಗಳು ಕಳ್ಳರ ಪಾಲಾಗಿವೆ. ಕಾರ್ಯಕ್ರಮಗಳಿಗೆ ದುಬಾರಿ ಖಾಸಗಿ ಸಭಾಭವನಗಳಿಗೆ ಹೋಗಬೇಕಾದ ಅನಿವಾರ್ಯತೆ ಜನರಿಗಿದೆ.

ಬೀದರ್​​, ಆಗಸ್ಟ್​​ 20: ಹುಮನಾಬಾದ್ ನಗರದಲ್ಲಿ 3.14 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೈಟೆಕ್ ಪುರಭವನವು ಏಳು ವರ್ಷಗಳಿಂದ ಉದ್ಘಾಟನೆಯ ಭಾಗ್ಯ ಕಾಣದೆ ಪಾಳುಬಿದ್ದಿದೆ. ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣ ಪೂರ್ಣಗೊಂಡಿದ್ದರೂ, ಪುರಸಭೆಗೆ ಹಸ್ತಾಂತರವಾಗದೆ ಸಾರ್ವಜನಿಕರ ಬಳಕೆಗೆ ಲಭ್ಯವಾಗಿಲ್ಲ. ಈ ಪುರಭವನವು 500 ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದ್ದು, ವಿದ್ಯುತ್ ಮತ್ತು ಎಸಿ ವ್ಯವಸ್ಥೆಯನ್ನು ಒಳಗೊಂಡಿತ್ತು. ಆದರೆ ಉದ್ಘಾಟನೆಯಾಗದ ಕಾರಣ, ಈಗ ಇದು ಭೂತ ಬಂಗಲೆಯಂತಾಗಿದೆ. ಕಟ್ಟಡದೊಳಗಿನ ಬಲ್ಬ್‌ಗಳು, ಫ್ಯಾನ್‌ಗಳು, ಎಸಿಗಳು, ಕುರ್ಚಿಗಳು ಕಳ್ಳರ ಪಾಲಾಗಿವೆ. ಸಾರ್ವಜನಿಕರ ತೆರಿಗೆ ಹಣವಾದ 3.14 ಕೋಟಿ ರೂಪಾಯಿ ಸಂಪೂರ್ಣವಾಗಿ ವ್ಯರ್ಥವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More