AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghati Subramanya Temple: ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಸಂಗ್ರಹವಾಗಿದ್ದ ಹಣ ಎಷ್ಟು ಗೊತ್ತಾ?

Ghati Subramanya Temple: ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಸಂಗ್ರಹವಾಗಿದ್ದ ಹಣ ಎಷ್ಟು ಗೊತ್ತಾ?

ನವೀನ್ ಕುಮಾರ್ ಟಿ
| Edited By: ಆಯೇಷಾ ಬಾನು|

Updated on: Oct 15, 2024 | 8:18 AM

Share

ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಭಕ್ತರ ಕಾಣಿಕೆಯಾಗಿ 51 ಲಕ್ಷದ 71 ಸಾವಿರ ಹಣ ಸಂಗ್ರಹವಾಗಿದೆ. ದಸರಾ ಹಬ್ಬ ಮುಗಿದ ಹಿನ್ನಲೆ ದೇವಾಲಯ ಆಡಳಿತ ಮಂಡಳಿ ಹುಂಡಿ‌ ಎಣಿಕೆ ಮಾಡಿತು.

ದೇವನಹಳ್ಳಿ, ಅ.15: ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ‌ ಇತಿಹಾಸ ಪ್ರಸಿದ್ದ ಘಾಟಿ ಸುಬ್ರಮಣ್ಯ (Ghati Subramanya Temple) ಕ್ಷೇತ್ರದಲ್ಲಿ ಭಕ್ತರು ಹಾಗೂ ದೇವಾಲಯ ಆಡಳಿತ ಮಂಡಳಿಯಿಂದ ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿಯಲ್ಲಿ ಭಕ್ತರ ಕಾಣಿಕೆಯಾಗಿ 51 ಲಕ್ಷದ 71 ಸಾವಿರ ಹಣ ಸಂಗ್ರಹವಾಗಿದೆ. 2 ಗ್ರಾಂ ಚಿನ್ನ ಹಾಗೂ 1 ಕೆಜಿ 94 ಗ್ರಾಂ ಬೆಳ್ಳಿಯನ್ನ ಭಕ್ತರು ಕಾಣಿಕೆ ರೂಪದಲ್ಲಿ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಣೆ ಮಾಡಿದ್ದಾರೆ. ದಸರಾ ಹಬ್ಬ ಮುಗಿದ ಹಿನ್ನಲೆ ದೇವಾಲಯ ಆಡಳಿತ ಮಂಡಳಿ ಹುಂಡಿ‌ ಎಣಿಕೆ ಮಾಡಿತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More