ವಿಜಯಪುರ ಬಳಿ ಅಪಘಾತಕ್ಕೀಡಾದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ಪ್ರಯಾಣಿಸುತ್ತಿದ್ದ ಕಾರು, ವೀಣಾ ಪ್ರಾಣಾಪಾಯದಿಂದ ಪಾರು
ವೀಣಾ ಕೈ ಮತ್ತು ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಎದುರುನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ವೀಣಾರ ಕಾರು ಗುದ್ದಿದೆ. ಜಖಂಗೊಂಡಿರುವ ಕಾರನ್ನು ದೃಶ್ಯಗಳಲ್ಲಿ ನೋಡಬಹುದು.
ವಿಜಯಪುರ: ಇಂದು ಮಧ್ಯಾಹ್ನವಷ್ಟೇ ನಾವು ಹುನುಗುಂದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಪತ್ನಿ ವೀಣಾ ಕಾಶಪ್ಪನವರ್ (Veena Kashappanavar) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು (CM Siddaramaiah) ವಿಜಯಪುರ ನಗರಕ್ಕೆ ಬರಮಾಡಿಕೊಂಡ ಬಗ್ಗೆ ಚರ್ಚಿಸಿದ್ದೆವು. ಸಾಯಂಕಾಲ ಅವರು ವಿಜಯಪುರದಿಂದ ಸಿಂದಗಿಗೆ ತೆರಳುತ್ತಿದ್ದಾಗ ಪ್ರಯಾಣಿಇಸುತ್ತಿದ್ದ ಕಾರು ವಿಜಯಪುರದ ಹೊರವಲಯದಲ್ಲಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಜೀವಕ್ಕೇನೂ ಅಪಾಯವಾಗಿಲ್ಲ. ವೀಣಾ ಕೈ ಮತ್ತು ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಎದುರುನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ವೀಣಾರ ಕಾರು ಗುದ್ದಿದೆ. ಜಖಂಗೊಂಡಿರುವ ಕಾರನ್ನು ದೃಶ್ಯಗಳಲ್ಲಿ ನೋಡಬಹುದು. ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾಗಿರುವ ವೀಣಾರನ್ನು ನೋಡಲು ಪತಿ ವಿಜಯಾನಂದ ಅಸ್ಪತ್ರೆಗೆ ಧಾವಿಸಿದ್ದಾರೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ