ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ

Updated on: Feb 24, 2026 | 9:30 PM

ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡ ಪತಿ ತೀವ್ರ ಆಘಾತದಿಂದ ಕುಸಿದುಬಿದ್ದ ಘಟನೆ ವೈರಲ್ ಆಗಿದೆ. ಈ ಮಾನಸಿಕ ಒತ್ತಡವು ವಾಸೊವಾಗಲ್ ಸಿಂಕೋಪ್‌ಗೆ ಕಾರಣವಾಗಿ, ಪ್ರಜ್ಞೆ ಕಳೆದುಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಪತಿಯನ್ನು ಕಂಡು ಪತ್ನಿ ಕ್ಷಮೆ ಕೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಂತಹ ತೀವ್ರ ಭಾವನಾತ್ಮಕ ಆಘಾತವು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು.

ತನ್ನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತನ್ನದೇ ಮನೆಯಲ್ಲಿ ಇರುವುದನ್ನು ಕಂಡು 37 ವರ್ಷದ ವ್ಯಕ್ತಿಯೊಬ್ಬರು ತೀವ್ರ ಆಘಾತದಿಂದ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿರುವ ವಿಡಿಯೋವೊಂದು ಎಕ್ಸ್​​​​ ಖಾತೆಯಲ್ಲಿ ವೈರಲ್​ ಆಗಿದೆ. ಪತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ತನ್ನ 25 ವರ್ಷದ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡಿದ್ದಾನೆ ಎಂದು ಹೇಳಲಾಗಿದೆ. ಅತಿಯಾದ ಮಾನಸಿಕ ಒತ್ತಡ ಮತ್ತು ಭಾವನಾತ್ಮಕ ನೋವಿನಿಂದಾಗಿ ಆತನ ರಕ್ತದೊತ್ತಡದಲ್ಲಿ ಏರುಪೇರಾಗಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಂಡ ಬಿದ್ದಿರುವುದನ್ನು ಕಂಡು ಹೆಂಡತಿ ನನ್ನನ್ನು ಕ್ಷಮಿಸು ಎಂದು ಗೋಳಾಡುತ್ತಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಇನ್ನು ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದಿಲ್ಲ. ಭಾಷೆಯನ್ನು ನೋಡಿದಾಗ ಇದು ಉತ್ತರ ಭಾರತದ ಘಟನೆ ಎಂದು ತಿಳಿಯುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More