ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!

Updated on: May 21, 2026 | 10:18 PM

ನನ್ನ ಹೆಂಡತಿ ಓಡಿಹೋಗುತ್ತಲೇ ಇರುತ್ತಾಳೆ, ಹಾಗಾಗಿ ನಾನು ಅವಳನ್ನು ಕಟ್ಟಿಹಾಕಿದೆ ಎಂದು ಗಂಡ ಹೇಳಿರುವ ವಿಡಿಯೋ ಪೊಲೀಸರನ್ನೂ ಬೆಚ್ಚಿಬೀಳಿಸಿದೆ. ಈ ವಿಡಿಯೋ ವೈರಲ್ ಆಗಿದೆ. ಕಲ್ಯಾಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಗಂಡ ಮತ್ತು ಹೆಂಡತಿಯ ನಡುವಿನ ಜಗಳ ತಾರಕಕ್ಕೇರಿದ್ದು, ಪತಿ ತನ್ನ ಹೆಂಡತಿಯನ್ನು ಹಗ್ಗದಿಂದ ಕಟ್ಟಿ ಕಂಬಕ್ಕೆ ಬಂಧಿಸಿದ್ದಾನೆ.

ನವದೆಹಲಿ, ಮೇ 21: ಬಿಹಾರದ ಮೋತಿಹಾರಿಯಲ್ಲಿ ದಂಪತಿಯ ನಡುವಿನ ಕೌಟುಂಬಿಕ ಕಲಹವು ತಾರಕಕ್ಕೇರಿದ್ದು, ಪತಿ ತನ್ನ ಹೆಂಡತಿಯನ್ನು ಹಗ್ಗದಿಂದ ಕಟ್ಟಿ ಹಾಕಿದ್ದಾನೆ. ಪೊಲೀಸರು ಮತ್ತು ಆ ಮಹಿಳೆಯ ತಂದೆ ಸ್ಥಳಕ್ಕೆ ಬಂದಾಗ, ಇಡೀ ಗ್ರಾಮವನ್ನೇ ದಿಗ್ಭ್ರಮೆಗೊಳಿಸುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿತು. ಹೆಂಡತಿಯೊಂದಿಗಿನ ಭಿನ್ನಾಭಿಪ್ರಾಯದಿಂದ ವ್ಯಕ್ತಿ ತನ್ನ ಹೆಂಡತಿಯನ್ನು ಕಂಬಕ್ಕೆ ಕಟ್ಟಿಹಾಕಿದ್ದಾನೆ. “ಅವಳು ಓಡಿಹೋಗುತ್ತಲೇ ಇರುತ್ತಾಳೆ. ಆದ್ದರಿಂದ ನಾನು ಅವಳನ್ನು ಕಟ್ಟಿ ಹಾಕಿದೆ” ಎಂದು ಆತ ಹೇಳಿದ್ದಾನೆ. ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More