ಆಟೋದಲ್ಲಿ ಇಬ್ಬರು ಯುವಕರ ಶವ ಪತ್ತೆ: ದುಶ್ಚಟದಿಂದ ಪ್ರಾಣಕ್ಕೆ ಕುತ್ತು ತಂದುಕೊಂಡ್ರಾ?

Updated on: Dec 03, 2025 | 5:49 PM

ಹೈದರಾಬಾದ್‌ನ ಚಂದ್ರಾಯನಗುಟ್ಟದಲ್ಲಿ ಆಟೋವೊಂದರಲ್ಲಿ ಜಹಾಂಗೀರ್ ಮತ್ತು ಇರ್ಫಾನ್ ಎಂಬ ಇಬ್ಬರು ಯುವಕರ ಶವಗಳು ಪತ್ತೆಯಾಗಿವೆ. ಸ್ಥಳದಲ್ಲಿ ಮೂರು ಸಿರಿಂಜ್‌ಗಳು ದೊರೆತಿವೆ. ಮಾದಕ ದ್ರವ್ಯದ ಮಿತಿಮೀರಿದ ಸೇವನೆಯಿಂದ ಸಾವು ಸಂಭವಿಸಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಮೂರನೇ ವ್ಯಕ್ತಿ ಪರಾರಿಯಾಗಿದ್ದಾನೆ. ಈ ಬಗ್ಗೆ ಚಂದ್ರಾಯನಗುಟ್ಟ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಹೈದರಾಬಾದ್‌, ಡಿ.3: ಹೈದರಾಬಾದ್‌ನ ಚಂದ್ರಾಯನಗುಟ್ಟದಲ್ಲಿ ಆಟೋವೊಂದರಲ್ಲಿ ಇಬ್ಬರು ಯುವಕರ ಶವಗಳು ಪತ್ತೆಯಾಗಿದ್ದು, ಇದೀಗ ಭಾರೀ ಅನುಮಾನಕ್ಕೆ ಕಾರಣವಾಗಿದೆ. ಚಂದ್ರಾಯನಗುಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ರೋಮನ್ ಹೋಟೆಲ್ ಎದುರಿನಲ್ಲಿ ನಿಲ್ಲಿಸಲಾಗಿದ್ದ ಆಟೋದಲ್ಲಿ ಮೃತ ದೇಹ ಪತ್ತೆಯಾಗಿದೆ. ಮೃತರನ್ನು ಜಹಾಂಗೀರ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ. ಒಟ್ಟು ಮೂರು ಜನ ಈ ಸ್ಥಳದಲ್ಲಿ ಇದ್ದರು ಎಂದು ಹೇಳಲಾಗಿತ್ತು. ಇದರಲ್ಲಿ ಒಬ್ಬ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿ ಮೂರು ಸಿರಿಂಜ್‌ಗಳು ಪತ್ತೆಯಾಗಿವೆ. ಮಾದಕ ದ್ರವ್ಯದ ಮಿತಿಮೀರಿದ ಸೇವನೆಯೇ ಇದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಇದೀಗ ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ