Video: ಹೈದರಾಬಾದ್​ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ, 10 ಮಂದಿ ಸಾವು

Updated on: Jun 30, 2025 | 12:40 PM

ಹೈದರಾಬಾದ್​ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟದಿಂದಾಗಿ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

ಹೈದರಾಬಾದ್, ಜೂನ್ 30: ಹೈದರಾಬಾದ್​ನ ಪತಂಚೇರುವಿನ ಪಾಶಮೈಲಾರಂನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟದಿಂದಾಗಿ ಭಾರಿ ಸ್ಫೋಟ ಕಾಣಿಸಿಕೊಂಡಿದ್ದು, ಕೂಡಲೇ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಪರಿಸ್ಥಿತಿಯನ್ನು ನಿಯಂತ್ರಿಸಲು ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಗಾಯಗೊಂಡ ಹಲವಾರು ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ಅಧಿಕಾರಿಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದ್ದಾರೆ. ಸ್ಫೋಟಗೊಂಡ ಬಳಿಕ ಕಾರ್ಮಿಕರು ಸುಮಾರು 100 ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More