ಹೈದರಾಬಾದ್ನ ಕಾರು ಶೋರೂಂನಲ್ಲಿ ಗುರುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಜನನಿಬಿಡ ಭಾಗದ ಕೊಂಡಾಪುರ ಜಂಕ್ಷನ್ ಬಳಿಯಿರುವ ಶೋರೂಮ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಗಮನಾರ್ಹ ಹಾನಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದರೂ, ಶೋರೂಂನಲ್ಲಿ ಇರಿಸಲಾಗಿದ್ದ ಹಲವಾರು ಹೊಸ ಕಾರುಗಳು ನಾಶವಾದವು. ಆರಂಭದಲ್ಲಿ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಯಿತು.
ಪಕ್ಕದ ಸಹಸ್ರ ಉಡುಪಿ ಗ್ರ್ಯಾಂಡ್ ಹೋಟೆಲ್ ಕಟ್ಟಡಕ್ಕೂ ಬೆಂಕಿ ವ್ಯಾಪಿಸಿದ್ದರಿಂದ ಹೆಚ್ಚಿನ ಹಾನಿಯಾಗುವ ಆತಂಕ ಎದುರಾಗಿದೆ. ಪೊಲೀಸರು ಮುನ್ನೆಚ್ಚರಿಕೆಯಾಗಿ ಹತ್ತಿರದ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜನಪ್ರಿಯ ಲಿವಿಂಗ್ ಸ್ಪೇಸ್ ಕಂಪನಿಯಿಂದ ನಿರ್ವಹಿಸಲ್ಪಡುವ ಕೊಠಡಿಗಳನ್ನು ತೆರವು ಮಾಡಿದರು. ಬೆಂಕಿಯನ್ನು ಹತೋಟಿಯಲ್ಲಿಡಲು ಮತ್ತು ಮತ್ತಷ್ಟು ಹರಡದಂತೆ ತಡೆಯಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿತ್ತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ