Video: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಹೈದರಾಬಾದ್‌ನ ಭದ್ರತಾ ಸಿಬ್ಬಂದಿಯೊಬ್ಬರು ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆ ಸೊಳ್ಳೆ ಪರದೆ ಅಳವಡಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯವು ರಾತ್ರಿ ಪಾಳಿಯಲ್ಲಿ ದುಡಿಯುವ ಭದ್ರತಾ ಸಿಬ್ಬಂದಿಗಳ ಕಷ್ಟದ ಸ್ಥಿತಿಗತಿ, ಸೌಲಭ್ಯಗಳ ಕೊರತೆ ಮತ್ತು ಸವಾಲುಗಳನ್ನು ಎತ್ತಿ ತೋರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವರ ದುಃಸ್ಥಿತಿಯ ಬಗ್ಗೆ ಈಗ ವ್ಯಾಪಕ ಚರ್ಚೆ ನಡೆಯುತ್ತಿದೆ. ಕನಿಷ್ಠ ಸೌಕರ್ಯಗಳ ಮಹತ್ವವನ್ನು ಇದು ಒತ್ತಿಹೇಳುತ್ತದೆ.
ಹೈದರಾಬಾದ್‌ನ ಅಪಾರ್ಟ್‌ಮೆಂಟ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಭದ್ರತಾ ಸಿಬ್ಬಂದಿಯೊಬ್ಬರು, ಸೊಳ್ಳೆಗಳ ಕಾಟದಿಂದ ರಕ್ಷಿಸಿಕೊಳ್ಳಲು ಕುರ್ಚಿಯ ಮೇಲೆಯೇ ಸೊಳ್ಳೆ ಹಾಕಿಕೊಂಡು ಕುಳಿತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎಕ್ಸ್ (X) ಬಳಕೆದಾರರಾದ ಸುರಜ್ ಕುಮಾರ್ ಬೌದ್ಧ್ ಎಂಬುವವರು ಹಂಚಿಕೊಂಡಿರುವ ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ಈ ದೃಶ್ಯವು ನೆಟ್ಟಿಗರ ಗಮನ ಸೆಳೆದಿದ್ದು, ಕನಿಷ್ಠ ಸೌಲಭ್ಯಗಳಿಲ್ಲದೆ ಸೊಳ್ಳೆಗಳ ಕಡಿತದ ನಡುವೆಯೂ ರಾತ್ರಿ ಪೂರ್ತಿ ಕಷ್ಟಪಟ್ಟು ಕೆಲಸ ಮಾಡುವ ಸೆಕ್ಯೂರಿಟಿ ಗಾರ್ಡ್‌ಗಳ ಸ್ಥಿತಿಗತಿ ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Apr 17, 2026 03:40 PM
Follow Us

