Video: ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!

Updated on: Apr 04, 2026 | 6:13 PM

ಹೈದರಾಬಾದ್‌ನ ಹೋಟೆಲ್ ಸಿಬ್ಬಂದಿ ಆಹಾರ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಸುರಿದ ಅಮಾನವೀಯ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ಈ ಕೃತ್ಯವನ್ನು ಬಹಿರಂಗಪಡಿಸಿದ್ದಾರೆ. ಸಿಬ್ಬಂದಿಯ ನಿರ್ದಯಿ ವರ್ತನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಖಂಡನೆಗೆ ಒಳಗಾಗಿದ್ದು, ಮಾನವೀಯತೆ ಮರೆತ ಘಟನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.

ಹೈದರಾಬಾದ್: ಹೋಟೆಲ್ ಒಂದಕ್ಕೆ ಆಹಾರದ ಆಸೆಯಿಂದ ಬಂದ ಭಿಕ್ಷುಕನ ಮೇಲೆ ಹೋಟೆಲ್​​ನ ಸಿಬ್ಬಂದಿ ಬಿಸಿನೀರು ಸುರಿದ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಈ ಅಮಾನವೀಯ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ಈ ಕೃತ್ಯವನ್ನು ವಿಡಿಯೋ ಮಾಡಿ ಬಹಿರಂಗಪಡಿಸಿದ ಬೆನ್ನಲ್ಲೇ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಬಿಸಿನೀರಿನಿಂದ ಕಂಗೆಟ್ಟು ನೋವಿನಿಂದ ನರಳುತ್ತಿದ್ದ ಆ ವ್ಯಕ್ತಿಯ ಪರವಾಗಿ ಹೋಟೆಲ್​​ನ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, “ಆತ ಪ್ರತಿದಿನ ಗ್ರಾಹಕರಿಗೆ ತೊಂದರೆ ನೀಡುತ್ತಿದ್ದ” ಎಂಬ ಬೇಜವಾಬ್ದಾರಿಯ ಸಮರ್ಥನೆ ಕೇಳಿಬಂದಿದೆ. “ಒಂದು ವೇಳೆ ತೊಂದರೆ ನೀಡುತ್ತಿದ್ದರೆ ಆತನನ್ನು ಬೆದರಿಸಿ ಕಳುಹಿಸಬೇಕಿತ್ತು ಅಥವಾ ಪೊಲೀಸರಿಗೆ ದೂರು ನೀಡಬೇಕಿತ್ತು, ಅದನ್ನು ಬಿಟ್ಟು ಇಷ್ಟು ಕ್ರೂರವಾಗಿ ವರ್ತಿಸುವುದು ಸರಿಯೇ?” ಎಂದು ಸಾಮಾಜಿಕ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಾಗ ಹೋಟೆಲ್ ಸಿಬ್ಬಂದಿ ಉತ್ತರಿಸಲಾಗದೆ ಮೌನಕ್ಕೆ ಶರಣಾಗಿದ್ದಾರೆ. ಸದ್ಯ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More