ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ನಮ್ಮ ಜೀವನದಲ್ಲಿ ಯಾವಾಗ ಏನು ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚಿನ ದಿನಗಳಲ್ಲಿ ಕ್ಷಣಾರ್ಧದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಈ ಕ್ಷಣ ಬದುಕಿದ್ದವರು ಮುಂದಿನ ಕ್ಷಣದಲ್ಲಿ ಬದುಕಿರುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಲು ಹೋದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹೈದರಾಬಾದ್: ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಹಾಕುವಾಗಲೇ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದೃಶ್ಯ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೈದರಾಬಾದ್ ನಗರದಲ್ಲಿ ಈ ದಾರುಣ ಘಟನೆ ನಡೆದಿದೆ. ಖಾಸಗಿ ಉದ್ಯೋಗದಲ್ಲಿರುವ ವಿಷ್ಣುವರ್ಧನ್ ಎಂಬ ವ್ಯಕ್ತಿ ಪ್ರತಿದಿನ ಬೆಳಗ್ಗೆ ವೀರಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗುತ್ತಿದ್ದರು. 2 ದಿನಗಳ ಹಿಂದೆ ಅವರು ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿದ್ದಾಗ ಏಕಾಏಕಿ ಹೃದಯಾಘಾತವಾಗಿ ಕುಸಿದು ಬಿದ್ದು, ಮೃತಪಟ್ಟಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ

