ಮನೆಯೆದುರು ಮೂತ್ರ ಮಾಡಿದವನಿಗೆ ಮನಬಂದಂತೆ ಥಳಿಸುತ್ತಿರುವ ವಿಡಿಯೋ ವೈರಲ್
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಆತನ ಮನೆಯ ಎದುರಲ್ಲೇ ಭೀಕರವಾಗಿ ಥಳಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಮಾನವೀಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ನಲ್ಲಿ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಮನೆಯ ಎದುರು ರಸ್ತೆಯಲ್ಲೇ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಮೇಡ್ಚಲ್ ಜಿಲ್ಲಾ ಕೇಂದ್ರದ ಅಲ್ವಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ನಾಗಿರೆಡ್ಡಿ ಕಾಲೋನಿಯಲ್ಲಿ ನಡೆದಿರುವ ಈ ಹೇಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ತಮ್ಮ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂಬ ಕಾರಣಕ್ಕೆ ಒಂದೇ ಕಾಲೋನಿಯಲ್ಲಿ ವಾಸಿಸುವ ಇಬ್ಬರ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದ ಪರಿಣಾಮ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ