AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ಕ್ಯಾಂಡಿ ಪ್ಯಾಕೆಟ್​ಗಳಲ್ಲಿ ಬ್ಯಾಂಕಾಕ್​ನಿಂದ ಬರುತ್ತಿತ್ತು ಡ್ರಗ್ಸ್! ಬೆಂಗಳೂರು ಏರ್​ಪೋರ್ಟಲ್ಲಿ ಇಬ್ಬರ ಬಂಧನ

ನವೀನ್ ಕುಮಾರ್ ಟಿ.
| Edited By: |

Updated on: Feb 12, 2026 | 9:25 AM

Share

ಬೆಂಗಳೂರು ಕೆಂಪೇಗೌಡ ಏರ್​​ಪೋರ್ಟ್​​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್​​ನಿಂದ ಹೈಡ್ರೋಪೋನಿಕ್ ಗಾಂಜಾ ಹಾಗೂ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. 3.39 ಕೋಟಿ ರೂಪಾಯಿ ಮೌಲ್ಯದ ಗಾಂಜಾ ಹಾಗೂ 4.7 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸದ್ಯ ಬಂಧಿತ ಪ್ರಯಾಣಿಕರನ್ನು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು, ಅಕ್ರಮ ಮಾದಕ ವಸ್ತು ಸಾಗಣೆ ಜಾಲದ ಕುರಿತು ತನಿಖೆ ಮುಂದುವರಿದಿದೆ.

ಬೆಂಗಳೂರು, ಫೆಬ್ರವರಿ 12: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIAB) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಪ್ರತ್ಯೇಕ ಪ್ರಕರಣಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊದಲ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ನಡೆಸಿದ ವೇಳೆ 9.7 ಕೆಜಿ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಈ ಗಾಂಜಾದ ಅಂದಾಜು ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎನ್ನಲಾಗಿದೆ. ತಕ್ಷಣವೇ ಪ್ರಯಾಣಿಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕೂಡ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕ ಅಕ್ರಮವಾಗಿ ಕ್ಯಾಂಡಿ ಪ್ಯಾಕೆಟ್‌ಗಳಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ವೇಳೆ ಸುಮಾರು 1.7 ಕೆಜಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದ್ದು, ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More