‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ನೇರವಾಗಿ ಹೇಳಿದ ರಾಕಿಂಗ್ ಸ್ಟಾರ್ ತಾಯಿ
‘ರಾಕಿಂಗ್ ಸ್ಟಾರ್’ ಯಶ್ ಅವರು ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದ್ದಾರೆ. ಅವರ ತಾಯಿ ಪುಷ್ಪ ಅರುಣ್ ಕುಮಾರ್ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ಅವರು ತಾವು ಯಶ್ ಫ್ಯಾನ್ ಅಲ್ಲ ಎಂದು ನೇರವಾಗಿ ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ (Yash) ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಅವರ ತಾಯಿ ಪುಷ್ಪಾ ಅರುಣ್ ಕುಮಾರ್ ಕೂಡ ಸಿನಿಮಾ ನಿರ್ಮಾಣಕ್ಕೆ ಇಳಿದಿದ್ದಾರೆ. ‘ಪಿಎ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಕೊತ್ತಲವಾಡಿ’ ಹೆಸರಿನ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಷ್ಪ ಅವರು, ಇಷ್ಟು ವಿನಮ್ರವಾಗಿ ನಡೆದುಕೊಳ್ಳಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ‘ನಾನು ಯಶ್ ಅಭಿಮಾನಿ ಅಲ್ಲ, ಅಣ್ಣಾವ್ರ ಅಭಿಮಾನಿ. ಅದಕ್ಕಾಗಿ ಹೀಗೆ ಇರೋದು’ ಎಂದು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos