ಭಾರತ-ಪಾಕ್ ಪಂದ್ಯಕ್ಕೆ ನನ್ನ ವಿರೋಧವಿದೆ ಎಂದ ಶಾಸಕ ಯತ್ನಾಳ್
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ನಿರಂತರ ಭಯೋತ್ಪಾದನಾ ಚಟುವಟಿಕೆ ಮತ್ತು ಆಕ್ರಮಿತ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ, ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೂ ಮತ್ತು ಆಕ್ರಮಿತ ಪ್ರದೇಶವನ್ನು ಬಿಟ್ಟುಕೊಡುವವರೆಗೂ ಭಾರತ ಯಾವುದೇ ಕ್ರೀಡಾ ಪಂದ್ಯಗಳಲ್ಲಿ ಭಾಗವಹಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.
ವಿಜಯಪುರ, ಸೆಪ್ಟೆಂಬರ್ 14: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ (India-Pakistan Asia Cup match) ನನ್ನ ವಿರೋಧವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ವಿರುದ್ಧ ಪಾಕಿಸ್ತಾನ ನಿರಂತರ ಭಯೋತ್ಪಾದನೆ ಮಾಡುತ್ತದೆ. ಅವರು ಭಯೋತ್ಪಾದನೆ ನಿಲ್ಲಿಸುವವರೆಗೆ ಯಾವುದೇ ಕ್ರೀಡೆ ಆಡಬಾರದು. ಗುಂಡಿಗೆ ಗುಂಡು ಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
