ಭಾರತ-ಪಾಕ್ ಪಂದ್ಯಕ್ಕೆ ನನ್ನ ವಿರೋಧವಿದೆ ಎಂದ ಶಾಸಕ ಯತ್ನಾಳ್ 

Edited By:

Updated on: Sep 14, 2025 | 1:49 PM

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ನಿರಂತರ ಭಯೋತ್ಪಾದನಾ ಚಟುವಟಿಕೆ ಮತ್ತು ಆಕ್ರಮಿತ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ, ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೂ ಮತ್ತು ಆಕ್ರಮಿತ ಪ್ರದೇಶವನ್ನು ಬಿಟ್ಟುಕೊಡುವವರೆಗೂ ಭಾರತ ಯಾವುದೇ ಕ್ರೀಡಾ ಪಂದ್ಯಗಳಲ್ಲಿ ಭಾಗವಹಿಸಬಾರದು ಎಂದು ಅವರು ಆಗ್ರಹಿಸಿದ್ದಾರೆ.

ವಿಜಯಪುರ, ಸೆಪ್ಟೆಂಬರ್​ 14: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ (India-Pakistan Asia Cup match) ನನ್ನ ವಿರೋಧವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ವಿರುದ್ಧ ಪಾಕಿಸ್ತಾನ ನಿರಂತರ ಭಯೋತ್ಪಾದನೆ ಮಾಡುತ್ತದೆ. ಅವರು ಭಯೋತ್ಪಾದನೆ ನಿಲ್ಲಿಸುವವರೆಗೆ ಯಾವುದೇ ಕ್ರೀಡೆ ಆಡಬಾರದು. ಗುಂಡಿಗೆ ಗುಂಡು ಕೊಡುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More