AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivarajkumar: ‘ನಾನು ನಟ ಮಾತ್ರ.. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ’: ಚುನಾವಣಾ ಪ್ರಚಾರದ ವೇಳೆ ಶಿವಣ್ಣನ ನೇರ ಮಾತು

Shivarajkumar: ‘ನಾನು ನಟ ಮಾತ್ರ.. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ’: ಚುನಾವಣಾ ಪ್ರಚಾರದ ವೇಳೆ ಶಿವಣ್ಣನ ನೇರ ಮಾತು

ಮದನ್​ ಕುಮಾರ್​
|

Updated on: May 02, 2023 | 4:49 PM

Share

Karnataka Assembly Election 2023: ಗೀತಾ ಶಿವರಾಜ್​ಕುಮಾರ್​ ಅವರು ಕಾಂಗ್ರೆಸ್​ ಸೇರ್ಪಡೆ ಆಗಿರುವುದರಿಂದ ಪ್ರಚಾರದಲ್ಲಿ ಶಿವಣ್ಣ ಭಾಗಿ ಆಗಿದ್ದಾರೆ. ಹಲವು ಊರುಗಳಿಗೆ ತೆರಳಿ ಅವರು ಪ್ರಚಾರ ಮಾಡುತ್ತಿದ್ದಾರೆ.

ನಟ ಶಿವರಾಜ್​ಕುಮಾರ್​ (Shivarajkumar) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈಗ ಅವರು ಕಾಂಗ್ರೆಸ್​ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಹಾಗಂತ ಅವರಿಗೆ ರಾಜಕೀಯದ ಬಗ್ಗೆ ಹೆಚ್ಚು ತಿಳಿದಿಲ್ಲವಂತೆ. ಶಿವಮೊಗ್ಗದಲ್ಲಿ ಪ್ರಚಾರದ ವೇಳೆ ಅವರು ಈ ಕುರಿತಾಗಿ ಮಾತನಾಡಿದ್ದಾರೆ. ‘ನಾನೊಬ್ಬ ನಟ ಮಾತ್ರ. ನನಗೆ ರಾಜಕೀಯದ ಬಗ್ಗೆ ಜಾಸ್ತಿ ತಿಳಿದಿಲ್ಲ. ಗೀತಾ (Geetha Shivarajkumar) ಅವರ ತಂದೆ ಬಂಗಾರಪ್ಪ ರಾಜಕೀಯದಲ್ಲಿ ಇದ್ದರು. ಮಧು ಕೂಡ ರಾಜಕೀಯದಲ್ಲಿ ಇದ್ದಾರೆ. ಗೀತಾ ಒಮ್ಮೆ ಲೋಕಸಭೆ ಎಲೆಕ್ಷನ್​ಗೆ ನಿಂತಿದ್ದರು. ಕಾಂಗ್ರೆಸ್​ (Congress) ಪಕ್ಷದ ಪರವಾಗಿ ಅವರು ಯಾವಾಗಲೂ ಇರುತ್ತಾರೆ. ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More