ನಾನಂತೂ ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ, ಜಡ್ಜ್ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 14, 2023 | 7:05 PM

ಅವತ್ತು ಮೈಸೂರಿಗೆ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಮತ್ತು ರಂದೀಪ್ ಸಿಂಗ್ ಸುರ್ಜೆವಾಲಾ ಕೂಡ ಬಂದಿದ್ದರು ಎಂದು ಹೇಳಿದ ಶಿವಕುಮಾರ್, ಖರ್ಗೆ ಸಾಹೇಬರು ಜಡ್ಜ್ ಸ್ಥಾನದಲ್ಲಿದ್ದಾರೆ, ತಾವು ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ ಎಂದರು.

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಇಂದು ನಗರದಲ್ಲಿ ಓಡಾಡಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು ಕಳೆದ ವಾರ ನಿಧನರಾದ ಕಾಂಗ್ರೆಸ್ ಮುಖಂಡ ಅರ್ ಧ್ರುವನಾರಾಯಣ (R Dhruvanarayana) ಮಗನಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು. ಅವತ್ತು ಮೈಸೂರಿಗೆ ಖರ್ಗೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಂದೀಪ್ ಸಿಂಗ್ ಸುರ್ಜೆವಾಲಾ ಕೂಡ ಬಂದಿದ್ದರು ಎಂದು ಹೇಳಿದ ಶಿವಕುಮಾರ್, ಖರ್ಗೆ ಸಾಹೇಬರು ಜಡ್ಜ್ ಸ್ಥಾನದಲ್ಲಿದ್ದಾರೆ, ತಾವು ಧ್ರುವನಾರಾಯಣ ಮಗನ ಪರ ವಾದಿಸುವ ವಕೀಲ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

 

Published on: Mar 14, 2023 07:05 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.