Assembly Polls: ಶ್ರೀರಾಮುಲು ಎಲ್ಲಿಂದ ಸ್ಪರ್ಧಿಸುತ್ತಾರೆ ನನಗೆ ಮುಖ್ಯವಲ್ಲ, ಕೆಆರ್ ಪಿಪಿಯನ್ನು ಅಧಿಕಾರಕ್ಕೆ ತರೋದು ಮಾತ್ರ ನನ್ನ ಗುರಿ: ಗಾಲಿ ಜನಾರ್ಧನ ರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 27, 2023 | 1:24 PM

ಕೆ ಆರ್ ಪಿ ಪಿಯನ್ನು ಬಲಪಡಿಸುವುದು ಮತ್ತು ಅಧಿಕಾರಕ್ಕೆ ತರುವುದೊಂದೇ ತಮ್ಮ ಗುರಿಯಾಗಿದೆ, ಬೇರೆ ಪಕ್ಷಗಳು ಮತ್ತು ಅವುಗಳ ನಾಯಕರ ಬಗ್ಗೆ ಮಾತಾಡುವುದಿಲ್ಲ ಎಂದು ಜನಾರ್ಧನ ರೆಡ್ಡಿ ಹೇಳಿದರು.

ರಾಯಚೂರು:  ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಸಂಸ್ಥಾಪಕ-ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ (G Janardhan Reddy) ಅವರು ಪಕ್ಷದ ಪ್ರಚಾರ ಕಾರ್ಯದಲ್ಲಿ ವಿಶ್ರಮಿಸದೆ ತೊಡಗಿದ್ದಾರೆ. ರಾಯಚೂರು ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತಾಡಿದ ರೆಡ್ಡಿ ಅವರು, ಹಿಂದೊಮ್ಮೆ ತಮ್ಮ ಪರಮಮಿತ್ರನಾಗಿದ್ದ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರಿಗೆ ಕ್ಷೇತ್ರ ಹುಡುಕಾಡುವಂಥ ಸ್ಥಿತಿ ಎದುರಾಗಿರುವ ಬಗ್ಗೆ ಕಾಮೆಂಟ್ ಮಾಡಲಿಲ್ಲ. ಕೆ ಆರ್ ಪಿ ಪಿಯನ್ನು ಬಲಪಡಿಸುವುದು ಮತ್ತು ಅಧಿಕಾರಕ್ಕೆ ತರುವುದೊಂದೇ ತಮ್ಮ ಗುರಿಯಾಗಿದೆ, ಬೇರೆ ಪಕ್ಷಗಳು ಮತ್ತು ಅವುಗಳ ನಾಯಕರ ಬಗ್ಗೆ ಮಾತಾಡುವುದಿಲ್ಲ ಎಂದು ಜನಾರ್ಧನ ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.