ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್ ಎಂದ ಹೆಚ್​ಸಿ ಮಹದೇವಪ್ಪ

ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್ ಎಂದ ಹೆಚ್​ಸಿ ಮಹದೇವಪ್ಪ

Edited By:

Updated on: Nov 29, 2026 | 6:41 PM

ಡಾ. ಹೆಚ್.ಸಿ. ಮಹದೇವಪ್ಪ ಅವರು ಬಸವಣ್ಣ ಮತ್ತು ಅಂಬೇಡ್ಕರ್ ಅವರಿಗೆ ಅವಮಾನಿಸುವ "ಮನುವಾದದ ವಿಕೃತ ಮನಸ್ಸುಗಳನ್ನು" ಖಂಡಿಸಿದ್ದಾರೆ. ಬಸವಣ್ಣನವರ ಸಮಾನತೆ ಮತ್ತು ಸಾಮಾಜಿಕ ಸುಧಾರಣಾ ಹೋರಾಟಗಳನ್ನು ವಿವರಿಸಿದ್ದಾರೆ. ಅಲ್ಲದೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಹುದ್ದೆಗೆ ತಮ್ಮನ್ನು ತಾವು ಪರಿಗಣಿಸದೆ, ಮುಖ್ಯಮಂತ್ರಿ ಅಭ್ಯರ್ಥಿ ಎಂಬರ್ಥದ ಮಾತುಗಳನ್ನಾಡಿದ್ದಾರೆ.

ವಿಜಯಪುರ, ನವೆಂಬರ್​ 29: ‘ವರ್ಕಿಂಗ್ ಪ್ರೆಸಿಡೆಂಟ್​ ನನ್ನ ಯೋಗ್ಯತೆಗೆ ಸರಿಯಾದ ಹುದ್ದೆಯಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾಗುವವನು, ಸಿಎಂ ಆಗುವ ಕ್ಯಾಂಡಿಡೇಟ್’ ಎಂದು ಮಾಜಿ ಸಚಿವ ಹೆಚ್​.ಸಿ.ಮಹದೇವಪ್ಪ ಹೇಳಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನೀಡಬೇಕೆಂಬ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ‘ಕೆಪಿಸಿಸಿ ಕಾರ್ಯಾಧ್ಯಕ್ಷ ಆಗುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತ, ಸದಸ್ಯನಾಗಿದ್ದೇನೆ. ಪಕ್ಷದಲ್ಲಿ ನನಗೆ ಯಾವುದೇ ಪೋಸ್ಟ್ ಕೊಡಿ ಎಂದು ನಾನು ಕೇಳಿಲ್ಲ. ಕಾಂಗ್ರೆಸ್​ ಸಿದ್ಧಾಂತಗಳೊಂದಿಗೆ ಕೆಲಸ ಮಾಡ್ತೇನೆ. ದೇಶದ ಸ್ವಾತಂತ್ರ್ಯವೇ ಕಾಂಗ್ರೆಸ್ ಪಕ್ಷದ ಉದ್ದೇಶವಾಗಿತ್ತು. ಸ್ವಾತಂತ್ರ್ಯ ಉದ್ದೇಶ ಸಮಾನತೆಯಾಗಿತ್ತು, ಇಂಥ ವಿಚಾರಗಳಿಗೆ ನಾನು ಬದ್ಧ’ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ಅಶೋಕ ಯಡಳ್ಳಿಯವರು ಮೂಲತಃ ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದವರು. ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಇದು ಇವರ ಕೆಲಸದ ಮಾಹಿತಿಯಾಗಿದೆ. ಪ್ರಾಥಮಿಕ ಶಿಕ್ಷಣ ನಂತರ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡವೇ ಇವರ ವಿದ್ಯಾ ಕ್ಷೇತ್ರವಾಗಿದೆ . ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ್ದಾರೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ, ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದಾರೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ, ಆಸಕ್ತಿ ಇವರಗಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ.

Read More