ನಿಜವಾದ ಬಿಗ್ ಬಾಸ್ ಯಾರು ಎನ್ನುವ ಪ್ರಶ್ನೆಗೆ ಸುದೀಪ್ ಕೊಟ್ರು ಉತ್ತರ

Updated on: Oct 03, 2023 | 2:49 PM

ಬಿಗ್ ಬಾಸ್ 10ನೇ ಸೀಸನ್​​ ಆರಂಭಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ಸತತವಾಗಿ 10ನೇ ಬಾರಿ ಈ ಶೋನ ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲಿಕೆ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ನಿಜವಾದ ಬಿಗ್ ಬಾಸ್ ಯಾರು ಅನ್ನೋದು ಅನೇಕರ ಪ್ರಶ್ನೆ. ಇದಕ್ಕೆ ಸುದೀಪ್ ಉತ್ತರ ಕೊಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ (Bigg Boss) ಮೂಲಕವೂ ಜನಪ್ರಿಯತೆ ಪಡೆದಿದ್ದಾರೆ. 10ನೇ ಸೀಸನ್​​ ಆರಂಭಕ್ಕೆ ಈಗಾಗಲೇ ದಿನಗಣನೆ ಶುರುವಾಗಿದೆ. ಸತತವಾಗಿ 10ನೇ ಬಾರಿ ಈ ಶೋನ ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲಿಕೆ ಆಗುತ್ತಿದೆ. ಈ ರಿಯಾಲಿಟಿ ಶೋನಲ್ಲಿ ನಿಜವಾದ ಬಿಗ್ ಬಾಸ್ ಯಾರು ಅನ್ನೋದು ಅನೇಕರ ಪ್ರಶ್ನೆ. ಇದಕ್ಕೆ ಸುದೀಪ್ ಉತ್ತರ ಕೊಟ್ಟಿದ್ದಾರೆ. ತಾವೇ ಬಿಗ್ ಬಾಸ್ ಎಂದು ಅವರು ಹೇಳಿದ್ದಾರೆ. ‘9 ಸೀಸನ್ ನಡೆಸಿಕೊಟ್ಟಿದ್ದು ಯಾರು? ಒಟಿಟಿ, ಟಿವಿ ಸೀಸನ್ ನಡೆಸಿಕೊಟ್ಟವರು ಯಾರು? ಯಾವಾಗಲೂ ಕಾಣಿಸೋರು ಯಾರು’ ಎಂದು ಸುದೀಪ್ ಪ್ರಶ್ನೆ ಕೇಳಿದರು. ಈ ಎಲ್ಲಾ ಪ್ರಶ್ನೆಗಳಿಗೆ ‘ಸುದೀಪ್’ (Sudeep) ಎಂಬುದೇ ಉತ್ತರ ಆಗಿತ್ತು. ಈ ಮೂಲಕ ಸುದೀಪ್ ತಾವೇ ಬಿಗ್ ಬಾಸ್ ಎಂದು ಒಪ್ಪಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More