‘ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ’; ರಿಷಬ್ಗೆ ಅಭಯ ನೀಡಿದ ದೈವ
ರಿಬಷ ಶೆಟ್ಟಿ ಅವರು ದೈವದ ಬಗ್ಗೆ ಅಪಾರ ಭಕ್ತಿ ಹೊಂದಿದವರು. ಅವರು ಈಗ ಪಂಜುರ್ಲಿಗೆ ಹರಕೆ ಕೋಲ ನೀಡಿ ಸಂತುಷ್ಟಗೊಂಡಿದ್ದಾರೆ. ಈ ವೇಳೆ ದೈವವು ನಿನ್ನ ಪರವಾಗಿ ಇರೋದಾಗಿ ಅಭಯ ನೀಡಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.
ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದ ಮೂಲಕ ದೈವದ ಆಚರಣೆಯನ್ನು ಪ್ರಪಂಚಕ್ಕೆ ತೋರಿಸಿದ್ದಾರೆ. ದೈವದ ಆಚರಣೆ ಬಗ್ಗೆ ಅವರು ಅಪಾರ ನಂಬಿಕೆ ಹೊಂದಿದ್ದಾರೆ. ಈಗ ಅವರು ಪಂಜುರ್ಲಿಗೆ ಹರಕೆ ಕೋಲ ನೀಡಿದ್ದಾರೆ. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ.
ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ. ಈ ಸಂದರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವರು ಭಾಗಿ ಆಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

