ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: ಹೆಚ್ಡಿ ಕುಮಾರಸ್ವಾಮಿ ಭಾವುಕ ಮಾತು
ತಾಯಿ ಚೆನ್ನಮ್ಮನವರ ಅಗಲಿಕೆಯ ನಂತರ, ಹೆಚ್.ಡಿ. ಕುಮಾರಸ್ವಾಮಿ ಅವರು ಅವರ ನೆನಪಿನಲ್ಲಿ ಸಮಾಜ ಸೇವೆಯ ವಿನೂತನ ಯೋಜನೆಗಳನ್ನು ಪ್ರಕಟಿಸಿದ್ದಾರೆ. ವೃದ್ಧರು, ಅನಾಥರು, ರೈತರು ಮತ್ತು ಸಂಸ್ಕೃತ ಪಾಠಶಾಲೆಗಳಿಗಾಗಿ ಈ ಸ್ಥಳವನ್ನು ಸಮರ್ಪಿಸಲಾಗುವುದು. ತಮ್ಮ ಗಳಿಕೆಯನ್ನು ನಾಡಿನ ಜನತೆಗೆ ಅರ್ಪಿಸುವ ಹಾಗೂ ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಬದ್ಧತೆಯನ್ನು ಅವರು ಪುನರುಚ್ಚರಿಸಿದ್ದಾರೆ.
ಹಾಸನ, ಜುಲೈ 29: ಮಾಜಿ ಪ್ರದಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಕಾರ್ಯ ನಾಳೆ ನಡೆಯಲಿದ್ದು, ಉತ್ತರ ಕ್ರಿಯಾದಿ ಕಾರ್ಯಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ‘ತಾಯಿ ನಮ್ಮನ್ನಗಲಿದ್ದಾರೆ ಎಂದು ನೆನಸಿಕೊಳ್ಳಲಿಕ್ಕೂ ಸಹ ಸಾಧ್ಯವಿಲ್ಲ, ಅವರು ನಮ್ಮೊಂದಿಗಿ ಓಡಾಡಿಕೊಂಡಿದ್ದಾರೆ ಎಂಬ ಭಾವನೆ ಇದೆ. ತಾಯಿ ಭೂಮಿ ತಾಯಿಯ ಮಡಿಲನ್ನು ಸೇರಿದ್ದರೂ, ಅವರು ತಮ್ಮ ಹೃದಯದಲ್ಲಿ ಸದಾ ಇರುತ್ತಾರೆ. ನನ್ನ ಬಳಿಗೆ ಬರುವ ಸಂಕಷ್ಟದಲ್ಲಿರುವವರಲ್ಲಿ ತಾಯಿಯನ್ನು ಕಾಣುತ್ತೇನೆ ಮತ್ತು ಅವರ ಕಷ್ಟಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 29, 2026 05:45 PM
Loading...
Unable to load recommendations.
Follow Us
