‘ಅರ್ಹ ವ್ಯಕ್ತಿ ಬಿಗ್ ಬಾಸ್ ಗೆಲ್ಲುತ್ತಾರೆ’ ಎಂದ ರಜತ್

Updated on: Dec 23, 2025 | 12:14 PM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಜತ್ ಅವರು ಅತಿಥಿಯಾಗಿ ತೆರಳಿದ್ದರು. ಈ ವೇಳೆ ಅವರಿಗೆ ಒಂದಷ್ಟು ಪ್ರಶ್ನೆಗಳು ಎದುರಾಗಿವೆ. ‘ನಿಮ್ಮ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಯಾರು’ ಎಂದು ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರಿಸಿದ್ದಾರೆ. ಅವರ ಪ್ರಕಾರ ಗೆಲ್ಲೋರ ಹೆಸರನ್ನು ಹೇಳಲು ಹಿಂದೇಟು ಹಾಕಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ ಮೂಲಕ ಅಪರೂಪದ ಅವಕಾಶ ಪಡೆದಿದ್ದಾರೆ ರಜತ್. ಅವರಿಗೆ ಒಂದು ತಿಂಗಳುಗಳಕಾಲ ಮನೆಯಲ್ಲಿ ಅತಿಥಿಯಾಗಿ ಉಳಿದುಕೊಳ್ಳುವ ಅವಕಾಶ ಸಿಕ್ಕಿತ್ತು. ಈ ಅವಕಾಶವನ್ನು ಅವರು ಸದ್ಬಳಕೆ ಮಾಡಿಕೊಂಡರು. ಅವರು ಗಿಲ್ಲಿ ಜೊತೆ ಕ್ಲೋಸ್ ಆಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರ ಬಂದು ಬಳಿಕ ಅವರು ಬೇರೆಯದೇ ರೀತಿ ನಡೆದುಕೊಂಡಿದ್ದಾರೆ. ‘ಯಾರು ಗೆಲ್ಲುತ್ತಾರೆ ಎಂದು ಹೇಳೋಕೆ ಸಾಧ್ಯವಿಲ್ಲ. ಅರ್ಹ ವ್ಯಕ್ತಿ ಬಿಗ್ ಬಾಸ್ ಗೆಲ್ತಾರೆ’ ಎಂದಿದ್ದಾರೆ ರಜತ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 23, 2025 12:14 PM