ಯತ್ನಾಳ್​ಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲ್ಲಲಿ: ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 01, 2025 | 7:24 PM

ರಾಜ್ಯಾದ್ಯಂತ ಓಡಾಡಿ ಜನಾಭಿಪ್ರಾಯ ಸಂಗ್ರಹಿಸಿ ಹೊಸ ಪಾರ್ಟಿ ಕಟ್ತೀನಿ ಅಂತ ಯತ್ನಾಳ್ ಹೇಳುತ್ತಾರೆ, ಇವರೇನಾದರೂ ಹೊಸ ಪಕ್ಷ ಕಟ್ಟಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬೇಕಾಗಿವಷ್ಟು ಅಭ್ಯರ್ಥಿಗಳೂ ಸಿಗಲಾರರು, ದಾರಿಹೋಕರ ಕೈಕಾಲು ಹಿಡಿದು ಚುನಾವಣೆಗೆ ನಿಲ್ಲಿಸಬೇಕಾಗುತ್ತದೆ ಎಂದು ಅಪರೂಪಕ್ಕೆ ನಕ್ಕ ರೇಣುಕಾಚಾರ್ಯ ಹೇಳಿದರು.

ದಾವಣಗೆರೆ, ಏಪ್ರಿಲ್ 1: ಬಸನಗೌಡ ಪಾಟೀಲ್ ಯತ್ನಾಳ್​ರನ್ನು ಉಚ್ಚಾಟನೆಗೆ ಮೊದಲು ಟೀಕಿಸುತ್ತಿದ್ದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಈಗಲೂ ಅದನ್ನು ಮುಂದುವರಿಸಿದ್ದಾರೆ. ಹಿಂದೂ ಹುಲಿ ಅಂತ ಹೇಳಿಕೊಳ್ಳುವ ಯತ್ನಾಳ್ ಬಿಜೆಪಿ ಟಿಕೆಟ್ ನಿಂದ ಗೆದ್ದಿದ್ದು, ಅವರಲ್ಲಿ ಪಕ್ಷ ಬಿಟ್ಟು ಹೋರಾಡುವ ತಾಕತ್ತಿದ್ರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲ್ಲಲಿ, ಗೆದ್ದರೆ ಅವರನ್ನು ಸತ್ಕರಿಸುತ್ತೇವೆ ಸನ್ಮಾನ ಮಾಡುತ್ತೇವೆ ಎಂದು ಹೇಳಿದರು. ಯತ್ನಾಳ್​ಗೆ ಬೇರೆಯವರನ್ನು ಬಯ್ಯುವುದಷ್ಟೇ ಗೊತ್ತು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ ಗೋಪಾಲ ಜೀ ಅವರನ್ನು ಬೈದಿರುವ ವಿಡಿಯೋ ಸಹ ತನ್ನ ಬಳಿ ಇದೆ ಎಂದು ರೇಣುಕಾಚಾರ್ಯ ಹೇಳಿದರು.

ಇದನ್ನೂ ಓದಿ:  ಬಿಜೆಪಿ ಸೇರುವಾಗ ಬಿಎಸ್​ವೈ ಕಾಲು ಹಿಡಿದಿದ್ದ ಯತ್ನಾಳ್ ಈಗ ಬೇರೆಯವರಿಂದ ಬಲಿಪಶು ಆಗುತ್ತಿದ್ದಾರೆ: ರೇಣುಕಾಚಾರ್ಯ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.