ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ: ಪರಮೇಶ್ವರ್
ರಾಹುಲ್ ಗಾಂಧಿ ಅವರು ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಅಲ್ಲಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ನಾಯಕರೊಂದಿಗೆ ಚರ್ಚೆ ನಡೆಸಿದರು. ಈ ಸಭೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾತನಾಡಿ, ಯಾವ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಬೆಂಗಳೂರು, ಜೂನ್ 07: ಕೆಪಿಸಿಸಿ ಕಚೇರಿಯಲ್ಲಿ ಸಂಸದ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆದ ಸಭೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ (G Parameshwara) ಹೇಳಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ 40 ಪರ್ಸೆಂಟ್ ಸರ್ಕಾರ ಅಂತ ಬಸವರಾಜ್ ಬೊಮ್ಮಾಯಿ ಸರ್ಕಾರದ ವಿರುದ್ಧ ಮಾಡಿದ್ದ ಆರೋಪ ಪ್ರಕರಣದ ವಿಚಾರಣೆಗೆ ರಾಹುಲ್ ಗಾಂಧಿ ಅವರು ಇಂದು (ಜೂ.7) ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿತು. ಜಾಮೀನು ಪಡೆದ ಬಳಿಕ ರಾಹುಲ್ ಗಾಂಧಿ ಅವರು ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಅಲ್ಲಿ, ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ನಾಯಕರೊಂದಿಗೆ ಚರ್ಚೆ ನಡೆಸಿದರು.
ಈ ಸಭೆ ಬಗ್ಗೆ ಮಾಧ್ಯಮ ಪ್ರತಿನಿಧಗಳು ಕೇಳಿದಾಗ, ಜಿ. ಪರಮೇಶ್ವರ್ ಯಾವ ಮೀಟಿಂಗ್? ಕೆಪಿಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಮೀಟಿಂಗ್ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.
ಈ ಹಿಂದೆಯೂ ಕೂಡ ಜಿ. ಪರಮೇಶ್ವರ್ ಪರಿಷತ್ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಮ್ಮ ಬಳಿ ಸಲಹೆಯನ್ನೂ ಕೇಳಿಲ್ಲ. ಪಕ್ಷಕ್ಕೆ ಕೆಲಸ ಮಾಡಿ ಅನುಭವ ಇರುವವರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದರು. ಈ ಮೂಲಕ ಪಕ್ಷದ ಹಿರಿಯ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ನೋಡಿ: ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ; ಬರಮಾಡಿಕೊಂಡ ಸಿಎಂ, ಡಿಸಿಎಂ