ಶಿವಕುಮಾರ್ ರಾಜಕೀಯ ಹೇಳಿಕೆಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ: ನಿಖಿಲ್ ಕುಮಾರಸ್ವಾಮಿ
ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗಾಗಿ ತಾನು ಮತ್ತು ಪಕ್ಷದ ಹಿರಿಯ ನಾಯಕರು ಮುಂದಿನ ತಿಂಗಳಿಂದ ರಾಜ್ಯದ ಪ್ರವಾಸ ಕೈಗೊಳ್ಳುವುದಾಗಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ದೇವೇಗೌಡರ ಮಾರ್ಗದರ್ಶನ ಮತ್ತು ಕುಮಾರಸ್ವಾಮಿಯವರ ನೇತೃತ್ವದಲ್ಲಿ ಪಕ್ಷ ಕಟ್ಟಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.
ಮಂಡ್ಯ, ಮೇ 12: ನಿನ್ನೆ ಡಿಕೆ ಶಿವಕುಮಾರ್ (DK Shivakumar) ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ, ರಾಜ್ಯದ ಉಪ ಮುಖ್ಯಮಂತ್ರಿಯಾಗಿ ರಾಜಕೀಯ ಹೇಳಿಕಗಳನ್ನು ನೀಡುವ ಅನಿವಾರ್ಯತೆ ಅವರಿಗಿದೆ, ಅದಕ್ಕೆ ತಮ್ಮದೇನೂ ಅಭ್ಯಂತರವಿಲ್ಲ, ಅದರೆ 1994 ರಿಂದ ಇಲ್ಲಿಯವರೆಗೆ ಮೂರು ದಶಕಗಳ ಅವಧಿಯಲ್ಲಿ ರಾಮನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಏನು ಕಾಣಿಕೆ ನೀಡಿದ್ದಾರೆ ಅಂತ ಜನರಿಗೆ ಗೊತ್ತಿದೆ, ಹಾಗಾಗಿ ಶಿವಕುಮಾರ್ ಅವರ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅವಶ್ಯಕತೆಯಿಲ್ಲ ಎಂದು ಹೇಳಿದರು.
ಇದನ್ನು ಓದಿ: Operation Sindoor; ಪಹಲ್ಗಾಮ್ ಉಗ್ರರ ದಾಳಿಗೆ ಭಾರತ ತಕ್ಕ ಪ್ರತೀಕಾರ ತೀರಿಸಿಕೊಂಡಿದೆ: ಡಿಕೆ ಶಿವಕುಮಾರ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ