ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆ ಶಿವಕುಮಾರ್ ಏನಂದ್ರು ನೋಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 09, 2025 | 10:44 PM

ತಮಿಳುನಾಡಿನ ಕುಂಬಕೋಣಂನ ಪ್ರತ್ಯಂಗಿರ ದೇವಿ ದೇವಸ್ಥಾನಕ್ಕೆ ಇಂದು ಕುಟುಂಬ ಸಮೇತ ಭೇಟಿ ನೀಡಿದ್ದ ಡಿಸಿಎಂ ಡಿಕೆ ಶಿವಕುಮಾರ್​ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಮೇಕೆದಾಟು ಯೋಜನೆಯ ವಿಳಂಬಕ್ಕೆ ರಾಜಕೀಯ ಕಾರಣಗಳನ್ನು ನೀಡಿದ್ದಾರೆ.

ತಮಿಳುನಾಡು, ಜನವರಿ 09: ತಿರುಪತಿ-ತಿರುಮಲದಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ. ತಮಿಳುನಾಡಿನ ಕಾಂಚೀಪುರಂನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೊಂದು ರಾಜ್ಯದ ವಿಚಾರ, ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡಲ್ಲ ಎಂದು ಹೇಳಿದ್ದಾರೆ. 2023ರ ಚುನಾವಣೆ ವೇಳೆ ವರದರಾಜ ದೇವಾಲಯಕ್ಕೆ ಭೇಟಿ ನೀಡಿದ್ದೆ. ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೆ. ದೇವರ ಅನುಗ್ರಹದಿಂದ ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿತ್ತು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.