ನನ್ನನ್ನು ಹಾಗೂ ಪಕ್ಷವನ್ನು ಕೈಬಿಡದಂತೆ ವೀರಶೈವ ಲಿಂಗಾಯತ ಸಮುದಾಯವನ್ನು ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ: ಬಿಎಸ್ ಯಡಿಯೂರಪ್ಪ

Arun Kumar Belly

|

Updated on: Feb 25, 2023 | 2:36 PM

ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಬಿಎಸ್​ವೈ ಹೇಳಿದರು.

ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಪಕ್ಷದ ಸಂಘಟನೆಗಾಗಿ ರಾಜ್ಯದ ಉದ್ದಗಲಕ್ಕೆ ಓಡಾಡಿ ಪಕ್ಷ ಸಂಘಟಿಸುವ ಮತ್ತು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ಮಾತನ್ನು ಪುನರಾವರ್ತಿಸಿದರು. ಬೆಂಗಳೂರಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸೋಮವಾರ ತಮ್ಮ ಹುಟ್ಟುಹಬ್ಬ ಮತ್ತು ಅಂದೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಆಗಮಿಸಲಿದ್ದಾರೆ ಎಂದು ಹೇಳಿದರು. ವೀರಶೈವ ಲಿಂಗಾಯತ (Veerashaiva Lingayat) ಮತಗಳು ಕೈತಪ್ಪುವ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು, ಹಾಗೇನೂ ಆಗದು, ಹಿಂದೆ ಸಮುದಾಯವರು ತಮ್ಮನ್ನು ಬೆಂಬಲಿಸಿದ ಹಾಗೆ ಮುಂದೆಯೂ ಬಿಜೆಪಿಯನ್ನು ಬೆಂಬಲಿಸುವಂತೆ ವಿನಂತಿಸಿಕೊಳ್ಳುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on

Click on your DTH Provider to Add TV9 Kannada