ರಾಜೀನಾಮೆ ನೀಡಿಲ್ಲ, ಮುಂದಿನ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ: ಕೆ ಅಣ್ಣಾಮಲೈ
ತಮಿಳುನಾಡುನಲ್ಲಿ ಎಐಎಡಿಎಂಕೆ ಜತೆ ಮೈತ್ರಿ ಮುಂದುವರಿಯುತ್ತದೆ, ಆ ಪಕ್ಷ ಭ್ರಷ್ಟವೋ ಅಥವಾ ಮತ್ತೊಂದು ತಮ್ಮ ಮುಂದಿರುವ ಪ್ರಶ್ನೆಯಲ್ಲ, ಆದರೆ ಅಧಿಕಾರದಲ್ಲಿರುವ ಡಿಎಂಕೆ ಪಕ್ಷದ ದುರಾಡಳಿತವವನ್ನು ತಡೆಯುವುದು ತಮ್ಮ ಗುರಿಯಾಗಿದೆ, ಮುಂದೊಂದು ದಿನ ಬಿಜೆಪಿಯು ತಮಿಳುನಾಡುನಲ್ಲಿ ತನ್ನ ಸ್ವಂತ ಸಾಮರ್ಥ್ಯದಿಂದ ಅಧಿಕಾರಕ್ಕೆ ಬರಲಿದೆ ಎಂದು ಅಣ್ಣಾಮಲೈ ಹೇಳಿದರು.
ಉಡುಪಿ, ಏಪ್ರಿಲ್ 9: ತಮಿಳುನಾಡು ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ (Tamil Nadu state BJP president) ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಅದರೆ ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ತಾನು ಸ್ಪರ್ಧಿ ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ ಚುನಾವಣೆ ಇನ್ನು ನಡೆದಿಲ್ಲ, ರಾಜ್ಯ ಘಟಕದ ಅಧ್ಯಕ್ಷನ ಚುನಾವಣೆ ಯಾವುದೇ ಸಮಯ ನಡೆಯಬಹುದು, ತಮಿಳುನಾಡು ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷವೊಂದರ ಜೊತೆ ಮೈತ್ರಿ ಬೇಕೆಂದು ವರಿಷ್ಠರು ಹೇಳಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕರ್ನಾಟಕ ನಕ್ಸಲರ ಶರಣಾಗತಿ ಪ್ರಕ್ರಿಯೆ ಅನುಮಾನ ಹುಟ್ಟಿಸುತ್ತದೆ, ಅದೊಂದು ದೊಡ್ಡ ಪ್ರಕ್ರಿಯೆ: ಕೆ ಅಣ್ಣಾಮಲೈ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ