AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಶಾಸಕ ಜಿಟಿ ದೇವೇಗೌಡ ಪರೋಕ್ಷ ಟಾಂಗ್​​

ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಶಾಸಕ ಜಿಟಿ ದೇವೇಗೌಡ ಪರೋಕ್ಷ ಟಾಂಗ್​​

ಗಂಗಾಧರ​ ಬ. ಸಾಬೋಜಿ
|

Updated on: Oct 03, 2024 | 4:33 PM

Share

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ನಾಯಕರು ಆಗ್ರಹಿಸುತ್ತಾರೆ ಬಂದಿದ್ದಾರೆ. ಆದರೆ ಇಂದು ಜೆಡಿಎಸ್​ ಶಾಸಕ ಜಿಟಿ.ದೇವೇಗೌಡ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ನಾನು ಇರುವುದನ್ನೇ ಹೇಳಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.

ಮೈಸೂರು, ಅಕ್ಟೋಬರ್​ 03: ಹೆಚ್​ಡಿ ಕುಮಾರಸ್ವಾಮಿಗೆ ಜಿ.ಟಿ.ದೇವೇಗೌಡನ (GT Deve Gowda) ಅರ್ಥ ಮಾಡಿಕೊಳ್ಳಲು ಆಗಿಲ್ಲ. 18 ವರ್ಷದಲ್ಲಿ ಸಿದ್ದರಾಮಯ್ಯಗೆ ಒಂದೇ ಒಂದು ಲೆಟರ್​ ಕೊಟ್ಟಿಲ್ಲ. ನನ್ನನ್ನು ಇನ್ನೊಬ್ಬರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ನಾನು ಇರುವುದನ್ನೇ ಹೇಳಿದ್ದೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರ ಬಗ್ಗೆ ಮಾತನಾಡಿಲ್ಲ. ಹೆಚ್​.ಡಿ.ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಹಾಗಾಗಿ ಅವರು ಕೂಡ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಸಿದ್ದರಾಮಯ್ಯ, ನನ್ನದು ಬಹಳ ಹಳೆಯ ವರ್ಷದ ಸಂಬಂಧ. ಹಿಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬೇರೆ ಅಲ್ಲ, ನಾನು ಬೇರೆ ಅಲ್ಲ. ಈಗ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ರಾಜಕೀಯ ವೈರಿಗಳಾಗಿದ್ದೇವೆ. ಹಿಂದೆ ರಾಜಕಾರಣದಲ್ಲಿ ಒಂದು ಶಿಸ್ತು ಇತ್ತು, ಈಗ ಆ ರೀತಿ ಇಲ್ಲ. ರಾಜಕಾರಣದಲ್ಲಿ ಯಾವಾಗ ಏನು ಆಗುತ್ತೋ ಗೊತ್ತಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More