ಬಿಜೆಪಿ ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ: ವಿಜಯೇಂದ್ರ
ಕರ್ನಾಟಕ ಘಟಕದ ಬಿಜೆಪಿ ಅಧ್ಯಕ್ಷರಾಗಿ ನಿಮ್ಮನ್ನು ಮುಂದುವರಿಸುವ ವಿಶ್ವಾಸ ಇದೆಯೇ ಎಂದು ಕೇಳಿದ ಪ್ರಶ್ನೆಗೆ ವಿಷಣ್ಣನಾಗಿ ನಕ್ಕಂತೆ ಕಂಡ ವಿಜಯೇಂದ್ರ, ಪಕ್ಷದ ರಾಜ್ಯಾಧ್ಯಕ್ಷನಾಗಿ ಕಳೆದ ಒಂದೂಕಾಲು ವರ್ಷದಲ್ಲಿ ಬಹಳ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ, ರಾಜ್ಯದ ಎಲ್ಲ ವಿದ್ಯಮಾನಗಳನ್ನು ವರಿಷ್ಠರಿಗೆ ರವಾನಿಸುವ ಕೆಲಸ ಮಾಡಿದ್ದೇನೆ, ನಮ್ಮದು ರಾಷ್ಟ್ರೀಯ ಪಕ್ಷ, ಎಲ್ಲಾ ಜಿಲ್ಲಾಧ್ಯಕ್ಷರ ಜೊತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಬೆಂಗಳೂರು, ಜೂನ್ 21: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತ ಪಕ್ಷಕ್ಕೆ ಇರುವ ಮಹತ್ವಕ್ಕಿಂತ ಹೆಚ್ಚಿನ ಪ್ರಾಮುಖ್ಯತೆ ವಿರೋಧ ಪಕ್ಷಕ್ಕಿರುತ್ತದೆ, ರಾಜ್ಯದಲ್ಲಿ ಕಳೆದೆರಡು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ (Congress government) ಕಾರ್ಯವೈಖರಿಯನ್ನು ಮತ್ತು ಅದರ ಕರಾಳ ಮುಖವನ್ನು ಜನರ ಮುಂದಿಡುವ ಪ್ರಯತ್ನವನ್ನು ಬಿಜೆಪಿ ಒಂದು ವಿಪಕ್ಷವಾಗಿ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ, ವಿರೋಧ ಪಕ್ಷವಾಗಿ ಬಿಜೆಪಿ ತನ್ನ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಇದನ್ನೂ ಓದಿ: ಬಯ್ಯುತ್ತೇನೆ ಎಂಬ ಕಾರಣಕ್ಕೆ ವಿಜಯೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ: ಬಸನಗೌಡ ಯತ್ನಾಳ್
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ