Karnataka Assembly Election: ಗಣಪತಿಗೆ ಪೂಜೆ ಮಾಡಿದ್ದೇನೆ ನಾನು ಗೆದ್ದೇ ಗೆಲ್ಲುತ್ತೇನೆ; ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಈ ಹಿನ್ನಲೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿದೆ. ಅದರಂತೆ ಇಂದು (ಮೇ.13) 224 ಕ್ಷೇತ್ರದ ಫಲಿತಾಂಶ ಬರಲಿದ್ದು, ಇಡೀ ರಾಜ್ಯವೇ ಕಾದು ನೋಡುತಿದೆ. ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಟೆಂಪಲ್ ರನ್ ಮಾಡಿದ್ದಾರೆ. ಹೌದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಐತಿಹಾಸಿಕ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಹೋದರ, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಗಣಪತಿಗೆ ಪೂಜೆ ಮಾಡಿದ್ದೇನೆ ನಾನು ಗೆದ್ದೇ ಗೆಲ್ಲುತ್ತೇನೆ ಎಂದಿದ್ದಾರೆ.
ಕರ್ನಾಟಕ ಚುನಾವಣಾ ಫಲಿತಾಂಶ ಲೈವ್ ಅಪ್ಡೇಟ್ಸ್ಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ